ಬೆಂಗಳೂರು: ಲಕ್ಷ್ಮಿ ಹೆಬ್ಬಾಳ್ಕರ್ ಗೆ ಅವಾಚ್ಯ ಶಬ್ದ ಬಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ದೂರಿಗೆ ಇದುವರೆಗೂ FIR ಹಾಕಿಲ್ಲ ಆದ್ದರಿಂದ ಸಿಐಡಿ ತನಿಖೆ ಮೇಲೆ ನನಗೆ ನಂಬಿಕೆ ಇಲ್ಲ ಎಂದು ಎಂಎಲ್‌ಸಿ ಸಿ.ಟಿ ರವಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಐಡಿ ತನಿಖೆ ಮೇಲೆ ನನಗೆ ನಂಬಿಕೆ ಇಲ್ಲ.
Advertisement
ನಾನು ಕೊಟ್ಟ ದೂರು ಇದುವರೆಗೂ ಎಫ್‌ಐಆರ್ ಹಾಕಿಲ್ಲ. ನನ್ನ ವಿರುದ್ಧ ಕೊಟ್ಟ ದೂರು ತನಿಖೆ ಆಗುತ್ತಿದೆ. ಇದರ ಅರ್ಥ ಏನು? ತಮ್ಮ ಮೇಲಿನ ಆರೋಪ ಮುಚ್ಚಿಕೊಳ್ಳಲು ಸುದ್ದಿ ಬಿಡುಗಡೆ ಮಾಡಿಸುತ್ತಿದ್ದಾರೆ.
ಅಂತೆ-ಕಂತೆ ಮಾಹಿತಿಗೆ ನಾನು ಪ್ರತಿಕ್ರಿಯೆ ಕೊಡಲ್ಲ. ದೂರು ಕೊಟ್ಟವರ ಮುಖ ಉಳಿಸಿಕೊಳ್ಳೋಕೆ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ನನಗೆ ನ್ಯಾಯಾಲಯದ ಮೇಲೆ ನಂಬಿಕೆ ಇದೆ. ನ್ಯಾಯಾಲಯ ಏನೇ ತೀರ್ಪು ಕೊಟ್ಟರೂ ನಾನು ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದರು.