ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್: WPL ವೇಳಾಪಟ್ಟಿ ಪ್ರಕಟ; ಮೊದಲ ಪಂದ್ಯದಲ್ಲೇ RCB ಕಣಕ್ಕೆ!

0
Spread the love

ಮಹಿಳಾ ಪ್ರೀಮಿಯರ್ ಲೀಗ್​ನ ಮೂರನೇ ಸೀಸನ್ ಆರಂಭಕ್ಕೆ ದಿನಗಣನೆ ಆರಂಭವಾಗಿದ್ದು, ಕ್ರಿಕೆಟ್ ಪ್ರೇಮಿಗಳು ಕಾತುರರಾರಾಗಿದ್ದಾರೆ.

Advertisement

ಡಬ್ಲ್ಯುಪಿಎಲ್​ನ ಮೂರನೇ ಆವೃತ್ತಿ ಫೆಬ್ರವರಿ 14 ರಿಂದ ಪ್ರಾರಂಭವಾಗಲಿದ್ದು, ಮಾರ್ಚ್​ 15 ರಂದು ನಡೆಯಲ್ಲಿರುವ ಫೈನಲ್ ಪಂದ್ಯದೊಂದಿಗೆ ಟೂರ್ನಿಗೆ ತೆರೆಬೀಳಲಿದೆ. ಈ ಟೂರ್ನಿಯ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ.

ವಡೋದರದಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಕೊಟಂಬಿ ಕ್ರೀಡಾಂಗಣದಲ್ಲಿ ಟೂರ್ನಿಯ ಮೊದಲ ಪಂದ್ಯ ನಡೆಯಲಿದ್ದು, ಅಂದು ಹಾಲಿ ಚಾಂಪಿಯನ್‌ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ, ಗುಜರಾತ್ ಜೈಂಟ್ಸ್ ತಂಡವನ್ನು ಎದುರಿಸಲಿದೆ.

ಈ ಬಾರಿ ಬಿಸಿಸಿಐ ಡಬ್ಲ್ಯುಪಿಎಲ್ ವ್ಯಾಪ್ತಿಯನ್ನು ವಿಸ್ತರಿಸುವ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಹಿಂದೆ ಲೀಗ್‌ನ ಮೊದಲ ಸೀಸನ್ ಮುಂಬೈನ ಎರಡು ವಿಭಿನ್ನ ಮೈದಾನಗಳಲ್ಲಿ ಮಾತ್ರ ನಡೆದಿದ್ದರೆ, ಕೊನೆಯ ಸೀಸನ್​ ಬೆಂಗಳೂರು ಮತ್ತು ದೆಹಲಿಯಲ್ಲಿ ನಡೆದಿತ್ತು. ಇದೀಗ 4 ಸ್ಥಳಗಳಲ್ಲಿ ಟೂರ್ನಿ ಆಯೋಜಿಸಲು ಬಿಸಿಸಿಐ ನಿರ್ಧರಿಸಿದೆ. ಈ ಬಾರಿಯ ಲೀಗ್ ಲಕ್ನೋ, ಮುಂಬೈ, ವಡೋದರಾ ಮತ್ತು ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದು, 30 ದಿನಗಳಲ್ಲಿ 22 ಪಂದ್ಯಗಳು ನಡೆಯಲಿವೆ.


Spread the love

LEAVE A REPLY

Please enter your comment!
Please enter your name here