Death: ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವು!

0
Spread the love

ನೆಲಮಂಗಲ: ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಹೊನ್ನಸಂದ್ರ ಗ್ರಾಮದಲ್ಲಿ ಜರುಗಿದೆ.

Advertisement

ರಾಯಚೂರು ಜಿಲ್ಲೆ ದೇವದುರ್ಗ ಮೂಲದ 32 ವರ್ಷದ ರಾಜ್ ಮಹಮದ್ ಮೃತ ಕಟ್ಟಡ ಕಾರ್ಮಿಕ. ಮೃತ ಕಾರ್ಮಿಕ ಬೆಂಗಳೂರು ಉತ್ತರ ತಾಲೂಕಿನ ಹೊನ್ನಸಂದ್ರ ಗ್ರಾಮದಲ್ಲಿ ಕಟ್ಟಡದ ಕೆಲಸ ಮಾಡುತ್ತಿದ್ದ. ಹೀಗೆ ಕಟ್ಟಡದ ಮೂರನೇ ಮಹಡಿಯಲ್ಲಿ ಕೆಲಸ ಮಾಡುವ ವೇಳೆ ಸ್ಲಿಪ್ ಆಗಿ ಕೆಳಗಡೆ ಬಿದ್ದು ಸಾವನ್ನಪ್ಪಿದ್ದಾನೆ.

ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


Spread the love

LEAVE A REPLY

Please enter your comment!
Please enter your name here