ಬೆಳಗಾವಿ: ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ, ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಇದರ ನಡುವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯವನ್ನು ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ವಿಚಾರಿಸಿದರು.
Advertisement
ಆಸ್ಪತ್ರೆಗೆ ಭೇಟಿ ನೀಡಿ, ಆದಷ್ಟು ಬೇಗನೇ ಗುಣಮುಖರಾಗಿ ಮತ್ತೆ ಜನರ ಸೇವೆಗೆ ಅಣಿಯಾಗುವಂತೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವದಿಸಿದರು. ಇದೇ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ಆಸ್ಪತ್ರೆಗೆ ತೆರಳಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಅರೋಗ್ಯ ವಿಚಾರಿಸಿ, ಧೈರ್ಯ ತುಂಬಿದರು.