ರಾಮನಗರ:- ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಬಸಾಪುರ ಗೇಟ್ ಬಳಿ ರಸ್ತೆ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ನರೇಗಾ ಎಂಜಿನಿಯರ್ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜರುಗಿದೆ.
Advertisement
25 ವರ್ಷದ ಶರಣ್ಯ ಗೌಡ ಮೃತ ದುರ್ದೈವಿ. ಕಳೆದ ಒಂದು ವರ್ಷದಿಂದ ಕನಕಪುರ ತಾಲೂಕಿನ ಸಾತನೂರು ಪಂಚಾಯತಿಯಲ್ಲಿ ನರೇಗಾ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಇದೇ ಫೆ.16 ರಂದು ಶರಣ್ಯ ವಿವಾಹ ನಿಶ್ಚಯವಾಗಿತ್ತು. ಶರಣ್ಯ ಬಳೆಹೊನ್ನಿಗ ಗ್ರಾಮದಿಂದ ಹಲಗೂರು ಕಡೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದರು. ಈ ವೇಳೆ ಬೈಕ್‌ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.