ಪಾಟ್ನಾ:- ಬಿಹಾರದ ಕತಿಹಾರ್ ಜಿಲ್ಲೆಯಲ್ಲಿನ ಗಂಗಾನದಿಯಲ್ಲಿ ದೋಣಿ ಮಗುಚಿ ಮೂವರು ಸಾವನ್ನಪ್ಪಿರುವ ಘಟನೆ ಜರುಗಿದೆ.
Advertisement
ಅಲ್ಲದೇ ಘಟನೆಯಲ್ಲಿ ನಾಲ್ವರು ನಾಪತ್ತೆ ಆಗಿದ್ದಾರೆ. 17 ಜನರಿದ್ದ ದೋಣಿ ಅಮ್ದಾಬಾದ್ ಪ್ರದೇಶದ ಗೋಲಾಘಾಟ್ ಬಳಿ ಮಗುಚಿಬಿದ್ದಿದೆ. ಇಲ್ಲಿಯವರೆಗೆ 10 ಮಂದಿಯನ್ನು ರಕ್ಷಿಸಲಾಗಿದೆ. ಈ ಪೈಕಿ ಅನೇಕರು ಈಜಿ ದಡ ಸೇರಿದ್ದಾರೆ. ನಾಪತ್ತೆಯಾದ ನಾಲ್ವರಿಗಾಗಿ ಶೋಧಕಾರ್ಯ ಮುಂದುವರಿದಿದೆ.
ಮೃತಪಟ್ಟವರಲ್ಲಿ ಇಬ್ಬರನ್ನು 60 ವರ್ಷದ ಪವನ್ ಕುಮಾರ್ ಮತ್ತು 70 ವರ್ಷದ ಸುಧೀರ್ ಮಂಡಲ್ ಎಂದು ಗುರುತಿಸಲಾಗಿದ್ದು, ಇನ್ನೋರ್ವ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ ಎನ್ನಲಾಗಿದೆ.