ರಾಯಚೂರು:- BY ವಿಜಯೇಂದ್ರ ಕರ್ನಾಟಕದ ಸಿಎಂ ಆಗೋದು ಖಚಿತ ಎಂದು ಮಾಜಿ ಸಚಿವ ಕೆ.ಶಿವನಗೌಡ ನಾಯಕ್ ಹೇಳಿದ್ದಾರೆ.
Advertisement
ರಾಯಚೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಈ ರಾಜ್ಯದ ಮುಖ್ಯಮಂತ್ರಿ ಆಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ವಿಜಯೇಂದ್ರ ಮುಂದೆ ಸಿಎಂ ಆಗೇ ಆಗುತ್ತಾರೆ ಎಂದರು.
ವಿಜಯೇಂದ್ರ ಈಗ ರಾಜ್ಯಾಧ್ಯಕ್ಷರಾಗಿದ್ದಾರೆ. ಮುಂದೆ ಒಂದು ದಿನ ಸಿಎಂ ಆಗಬೇಕು. ಅಧಿಕಾರದ ಕತ್ತಿ ಹಿಡಿದು ಸರ್ಕಾರವನ್ನು ತರಬೇಕಿದೆ. ಜಿಲ್ಲೆಯಲ್ಲಿ ಜನ ಏಮ್ಸ್ ಹೋರಾಟ ನಿರಂತರವಾಗಿ ಮಾಡುತ್ತಿದ್ದಾರೆ. ವಿಜಯೇಂದ್ರ ಅವರು ಪ್ರಧಾನಿ ನರೇಂದ್ರ ಮೋದಿ, ಜೆ.ಪಿ ನಡ್ಡಾ, ಅಮಿತ್ ಶಾ ಅವರ ಮನವೊಲಿಸಿ ಏಮ್ಸ್ ತರಬಹುದು. ಅದು ವಿಜಯೇಂದ್ರ ಅವರಿಂದ ಸಾಧ್ಯವಿದೆ ಎಂದು ಹೇಳಿದರು.