ಬಿಗ್ ಬಾಸ್ ಕನ್ನಡ ಸೀಸನ್ 11 ಫಿನಾಲೆಗೆ ಇನ್ನೊಂದು ವಾರ ಮಾತ್ರವೇ ಭಾಕಿ ಇದೆ. ಕಳೆದ 11 ವರ್ಷಗಳಿಂದ ಬಿಗ್ ಬಾಸ್ ನಿರೂಪಣೆಯನ್ನು ಯಶಸ್ವಿಯಾಗಿ ನಡೆಸಿಕೊಂಡು ಬಂದಿರುವ ಕಿಚ್ಚ ಸುದೀಪ್ ಇದೀಗ ಭಾವುಕ ಪೋಸ್ಟ್ ಒಂದನ್ನು ಬರೆದುಕೊಂಡಿದ್ದಾರೆ.
ಮುಂದಿನ ಭಾನುವಾರ ಬಿಗ್ಬಾಸ್ 11 ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಸುದೀಪ್ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ.
ಬಿಗ್ ಬಾಸ್ ಜರ್ನಿ ಜೀವನದಲ್ಲಿ ಮರೆಯಲಾಗದ ನೆನಪು. ಇದನ್ನು ಉತ್ತಮ ರೀತಿಯಲ್ಲಿ ನಿಭಾಯಿಸಿದ್ದೇನೆ ಎಂಬ ಸಂತೋಷ ನನಗಿದೆ. ಈ ಅವಕಾಶ ಕೊಟ್ಟ ಕಲರ್ಸ್ ಕನ್ನಡ ವಾಹಿನಿಗೆ ಧನ್ಯವಾದಗಳು. ನಿಮ್ಮೆಲ್ಲರ ಮೇಲೂ ಅಪಾರವಾದ ಪ್ರೀತಿ ಮತ್ತು ಗೌರವವಿದೆ ಎಂದು ಕಿಚ್ಚ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಬಿಗ್ ಬಾಸ್ ಸೀಸನ್ 11 ನಡೆಸಿಕೊಡುವುದಿಲ್ಲ. ಬಿಗ್ ಬಾಸ್ ನಿರೂಪಣೆಯನ್ನು ಮುಗಿಸುತ್ತಿದ್ದೇನೆ ಎಂದು ಸುದೀಪ್ ಈ ಹಿಂದೆ ಹೇಳಿದ್ದರು. ಆದರೆ ವಾಹಿನಿ ಮತ್ತು ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಶೋ ನಡೆಸಲು ಒಪ್ಪಿಗೆ ನೀಡಿದ್ದರು. ಆದರೆ ಇದೀಗ ಸುದೀಪ್ ಬಿಗ್ ಬಾಸ್ ನಿರೂಪಣೆಗೆ ಗುಡ್ ಬಾಯ್ ಹೇಳುತ್ತಿದ್ದು ಅದರನ್ನು ಮತ್ತೊಮ್ಮೆ ಕನ್ಪಾರ್ಮ್ ಮಾಡಿದ್ದಾರೆ.