ಕಾರ್ಮಿಕರಿಗೆ ಹಿಗ್ಗಾ ಮುಗ್ಗಾ ಥಳಿಸಿದ ಪ್ರಕರಣ: ಕಾರ್ಖಾನೆ ಮಾಲೀಕ ಸೇರಿ ಮೂವರು ಅರೆಸ್ಟ್.!

0
Spread the love

ವಿಜಯಪುರ: ಕೆಲಸಕ್ಕೆ ಬರುವುದಿಲ್ಲ ಎಂದ ಕಾರ್ಮಿಕರಿಗೆ ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ವಿಜಯಪುರದ ಗಾಂಧಿನಗರ ಏರಿಯಾದಲ್ಲಿರುವ ಇಟ್ಟಂಗಿ ಭಟ್ಟಿಯಲ್ಲಿ ನಡೆದಿತ್ತು.ಇನ್ನೂ ಈ ಘಟನೆ ಸಂಬಂಧ ಕಾರ್ಖಾನೆ ಮಾಲೀಕ ಸೇರಿ ಮೂವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Advertisement

ಖೇಮು ರಾಠೋಡ್, ವಿಶಾಲ ಜುಮನಾಳ ಹಾಗೂ ಸಚಿವ ಮಾನವರ ಬಂಧಿತ ಆರೋಪಿಗಳಾಗಿದ್ದು, ಈ ಕುರಿತು ವಿಜಯಪುರ ಎಸ್‌ಪಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೀಕ ಸೇರಿದಂತೆ ಮೂವರನ್ನು ಬಂಧಿಸಲಾಗಿದ್ದು, ಉಳಿದವರಿಗಾಗಿ ಹುಡುಕಾಟ ನಡೆಸಿದ್ದೇವೆ.

ಆದಷ್ಟು ಬೇಗ ಅವರನ್ನ ಬಂಧಿಸುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ. ಸದ್ಯ ಬಿಎನ್‌ಎಸ್ ಸೆಕ್ಷನ್ 109ರ ಅಡಿಯಲ್ಲಿ (ಕೊಲೆಗೆ ಯತ್ನ) ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here