ದುಷ್ಕರ್ಮಿಗಳಿಗೆ ಜೀವಾವಧಿ ಶಿಕ್ಷೆ ನೀಡಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಕ್ರಾಂತಿ ಸೇನಾ ಗದಗ ಜಿಲ್ಲಾ ಸಂಘಟನೆ ವತಿಯಿಂದ ಗಜೇಂದ್ರಗಡದ ಸಹೋದರಿ ಖುಷಿ ರಂಗರೇಜ ಆತ್ಮಹತ್ಯೆಯನ್ನು ಖಂಡಿಸಿ ಆತ್ಮಹತ್ಯೆಗೆ ಕಾರಣವಾಗಿರುವ ದುಷ್ಕರ್ಮಿಗಳಿಗೆ ಜೀವಾವಧಿ ಶಿಕ್ಷೆ ನೀಡಬೇಕೆಂದು ಪ್ರತಿಭಟನೆ ನಡೆಸಿ, ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

Advertisement

ಈ ಸಂದರ್ಭದಲ್ಲಿ ಕ್ರಾಂತಿ ಸೇನಾ ಗದಗ ಜಿಲ್ಲಾಧ್ಯಕ್ಷ ಬಾಬು ಬಾಕಳೆ ಮಾತನಾಡಿ, ಗಜೇಂದ್ರಗಡ ಹಿಂದೂ ಸಮಾಜದ ಯುವತಿ ಖುಷಿ ರಂಗರೇಜ್‌ಗೆ ಪ್ರೀತಿಸುವಂತೆ ಕಿರುಕುಳ ನೀಡಿದ್ದರಿಂದ ಅವಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅವಳ ಸಾವಿಗೆ ಕಾರಣರಾದ ದುಷ್ಟರನ್ನು ಜೀವಾವಧಿ ಶಿಕ್ಷೆ ನೀಡಬೇಕು ಹಾಗೂ ರಾಜ್ಯದಲ್ಲಿ ಹಿಂದೂ ಸಮಾಜದ ಯುವತಿಯರ ಮೇಲೆ ಲವ್ ಜಿಹಾದ್ ಪ್ರಕರಣಗಳು ನಡೆಯುತ್ತಿದ್ದು, ಇದರ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಶ್ರೀ ರಾಜರಾಜೇಶ್ವರಿ ಮಹಿಳಾಮಂಡಳದ ಅಧ್ಯಕ್ಷೆ ರೇಣುಕಾ ಕಬಾಡಿ, ಕ್ರಾಂತಿ ಸೇನಾ ಗದಗ ಜಿಲ್ಲಾ ಮಹಿಳಾ ಅಧ್ಯಕ್ಷೆ ರಾಣಿ ಚಂದಾವರಿ, ಬಿಜೆಪಿ ಮುಖಂಡರಾದ ಸುಧೀರ್ ಕಟೀಗರ, ರವಿ ಸಿದ್ದಲಿಂಗ, ಪ್ರವೀಣ್, ಭೀಮಾ ಕಟೀಗಾರ್, ಹಬೀಬ, ಭರತ, ನಾರಾಯಣ ಮುಂತಾದವರು ಭಾಗವಹಿಸಿದ್ದರು.


Spread the love

LEAVE A REPLY

Please enter your comment!
Please enter your name here