ಅಮೆರಿಕದಲ್ಲಿ ಗಂಡು, ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲಾಗುವುದು: ಡೊನಾಲ್ಡ್ ಟ್ರಂಪ್

0
Spread the love

ವಾಷಿಂಗ್ಟನ್ : ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಸ್ವೀಕರಿಸಿದ್ದು ಈ ಅದ್ಭುತ ಕ್ಷಣಕ್ಕೆ ಹಲವು ಗಣ್ಯರು ಸಾಕ್ಷಿಯಾಗಿದ್ದರು. ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಟ್ರಂಪ್ ಮಹತ್ವದ ಆದೇಶಕ್ಕೆ ಘೋಷಿಸಿದ್ದಾರೆ.

Advertisement

ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಲಿಂಗ ತಾರತಮ್ಯವನ್ನು ಕೊನೆಗೊಳಿಸುವ ಕಾರ್ಯಕಾರಿ ಆದೇಶಕ್ಕೆ ಶೀಘ್ರದಲ್ಲೇ ಸಹಿ ಹಾಕುವುದಾಗಿ ಘೋಷಿಸಿದ್ದಾರೆ. ಅಮೆರಿಕದ ಫೆಡರಲ್ ಸರ್ಕಾರವು ಗಂಡು ಮತ್ತು ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲಿದೆ ಎಂದು ಟ್ರಂಪ್ ಹೇಳಿದ್ದಾರೆ.

ಅಮೆರಿಕದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಾತನಾಡಿದ ಡೊನಾಲ್ಡ್ ಟ್ರಂಪ್, ಇನ್ನು ಮುಂದೆ ಅಮೆರಿಕದಲ್ಲಿ ಗಂಡು ಮತ್ತು ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲಾಗುತ್ತದೆ. ಇದು ನಮ್ಮ ಸರ್ಕಾರದ ಅಧಿಕೃತ ನೀತಿಯಾಗಿದೆ ಎಂದಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಅಮೆರಿಕದಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರ ಹಕ್ಕುಗಳು ರಾಜಕೀಯ ವಿಷಯವಾಗಿದೆ. ಕಳೆದ ಚುನಾವಣಾ ಪ್ರಚಾರದಲ್ಲಿ ಅನೇಕ ರಿಪಬ್ಲಿಕನ್ನರು ಲಿಂಗತ್ವ ಅಲ್ಪ ಸಂಖ್ಯಾತರಿಗೆ ಸಂಬಂಧಿಸಿದ ಕಾನೂನುಗಳನ್ನು ರದ್ದುಗೊಳಿಸುವ ಬಗ್ಗೆ ಮಾತನಾಡಿದ್ದರು. ಕ್ರೀಡೆಗಳಲ್ಲಿ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳೆಯರು ಭಾಗವಹಿಸುವುದಕ್ಕೆ ವಿರೋಧ ವ್ಯಕ್ತವಾಗಿತ್ತು. ಈ ಬೆಳವಣಿಗೆಗಳ ಬಳಿಕ ಟ್ರಂಪ್ ಈ ನಿರ್ಧಾರ ಕೈಗೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here