ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗದಗ ಹಾಗೂ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಗಜೇಂದ್ರಗಡ ವತಿಯಿಂದ ಗಜೇಂದ್ರಗಡದಲ್ಲಿ ಜರುಗಿದ ಗದಗ ಜಿಲ್ಲಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕಳಸಾಪೂರ ಗ್ರಾಮದ ಬಸವಕೇಂದ್ರದ ಕಾರ್ಯಾಧ್ಯಕ್ಷ, ಕನ್ನಡ ಅಭಿಮಾನಿಗಳಾದ ಮಲ್ಲಿಕಾರ್ಜುನ ಬ.ಖಂಡಮ್ಮನವರ ಅವರಿಗೆ ‘ಸುವರ್ಣ ಸಿರಿ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದ ಸಾನ್ನಿಧ್ಯವನ್ನು ಪೂಜ್ಯಶ್ರೀ ಷ.ಬ್ರ. ಡಾ. ಕೊಟ್ಟೂರು ಬಸವೇಶ್ವರ ಶಿವಾಚಾರ್ಯರು ಜುಕ್ತಿಹಿರೇಮಠ ಸೂಡಿ ಇವರು ವಹಿಸಿದ್ದರು. ಸ್ವಾಗತ ಸಮಿತಿ ಅಧ್ಯಕ್ಷರು, ಶಾಸಕರಾದ ಜಿ.ಎಸ್. ಪಾಟೀಲ, ಗದಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಪ್ರೊ. ಚಂದ್ರಶೇಖರ ವಸ್ತ್ರದ, ಗದಗ ಜಿಲ್ಲಾ ಕಸಾಪ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ, ಗಜೇಂದ್ರಗಡ ತಾಲೂಕಾ ಕಸಾಪ ಅಧ್ಯಕ್ಷ ಅಮರೇಶ ಗಾಣಿಗೇರ, ಸಿ.ಕೆ.ಎಚ್. ಶಾಸ್ತ್ರೀ ಇವರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು ಎಂದು ಗದಗ ಜಿಲ್ಲಾ ಕಸಾಪ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ತಿಳಿಸಿದ್ದಾರೆ.