ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಕೇಸ್; ಪ್ರಮುಖ ಆರೋಪಿಯ ಬಂಧನ!

0
Spread the love

ಬೆಂಗಳೂರು:- ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ.

Advertisement

ಅತೀಕ್ ಅಹ್ಮದ್ ಬಂಧಿತ ಆರೋಪಿ. ಈತ ನಿಷೇಧಿತ ಪಿಎಫ್ಐ ಸದಸ್ಯನಾಗಿದ್ದ ಎನ್ನಲಾಗಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸದಸ್ಯನಾಗಿದ್ದ ಅತೀಕ್ ಪ್ರವೀಣನ ಕೊಲೆ ಬಳಿಕ ಆರೋಪಿ ಮುಸ್ತಫಾನಿಗೆ ಆಶ್ರಯ ನೀಡಿ ಸಹಾಯ ಮಾಡಿದ್ದ. ಅಲ್ಲದೇ ಮುಸ್ತಫಾನನ್ನು ಚೆನ್ನೈಗೆ ಕಳಿಸಿ ಪರಾರಿಯಾಗಲು ನೆರವು ನೀಡಿದ್ದ. ಹೀಗಾಗಿ, ಆತನನ್ನು ಬಂಧಿಸಲಾಗಿದೆ. ಈ ಕುರಿತು ಎನ್​ಐಎಯಿಂದ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಲಾಗಿದೆ.

ಇನ್ನೂ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ 6 ಆರೋಪಿಗಳು ನಾಪತ್ತೆಯಾಗಿದ್ದು, ಆ 6 ಆರೋಪಿಗಳ ಪತ್ತೆಗಾಗಿ ಎನ್ಐಎ ತಂಡದಿಂದ ಶೋಧ ನಡೆಸಲಾಗುತ್ತಿದೆ.


Spread the love

LEAVE A REPLY

Please enter your comment!
Please enter your name here