ಕಾರವಾರ:- ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 9 ಮಂದಿ ದಾರುಣ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಜರುಗಿದೆ.
ಘಟನೆಯಿಂದ ಸುಮಾರು 17 ಮಂದಿ ಗಾಯಗೊಂಡಿದ್ದು, ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಘಟ್ಟ ಭಾಗದಲ್ಲಿ ತಡರಾತ್ರಿ ಈ ದುರಂತ ನಡೆದಿದೆ.
ಹಾವೇರಿಯಿಂದ ಕುಮಟಾ ಸಂತೆಗೆ ತರಕಾರಿ ಸಾಗಿಸುತ್ತಿದ್ದ ಮಿನಿ ಲಾರಿಯಲ್ಲಿದ್ದ ಫಯಾಜ್ ಇಮಾಮ್ ಸಾಬ್ ಜಮಖಂಡಿ (45), ವಾಸೀಮ್ ವಿರುಲ್ಲಾ ಮುಡಗೇರಿ (35), ಇಜಾಜ್ ಮುಸ್ತಕಾ ಮುಲ್ಲಾ (20), ಸಾದಿಕ್ ಭಾಷ್ (30), ಗುಲಾಮ್ ಹುಸೇನ್ ಜವಳಿ (40), ಇಮ್ತಿಯಾಜ್ ಮಮಜಾಪರ್ ಮುಳಕೇರಿ (36), ಅಲ್ಪಾಜ್ ಜಾಫರ್ ಮಂಡಕ್ಕಿ (25), ಜೀಲಾನಿ ಅಬ್ದುಲ್ ಜಖಾತಿ (25), ಅಸ್ಲಂ ಬಾಬುಲಿ ಬೆಣ್ಣಿ (24) ಮೃತರು ಎನ್ನಲಾಗಿದೆ
ತರಕಾರಿ ತುಂಬಿದ್ದ ಲಾರಿ ಹಾವೇರಿಯಿಂದ ಅಂಕೋಲದ ಕಡೆ ಹೊರಟಿತ್ತು, ಲಾರಿಯಲ್ಲಿ 30 ಮಂದಿ ಕುಳಿತಿದ್ದರು. ವೇಗವಾಗಿ ಬರುತ್ತಿದ್ದ ವೇಳೆ ಲಾರಿ ಪಲ್ಟಿಯಾಗಿ ದುರಂತ ಸಂಭವಿಸಿದೆ.
ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಯಲ್ಲಾಪುರ ಪೊಲೀಸರು 9 ಜನರ ಶವಗಳನ್ನ ಹೊರತೆಗೆದಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.