ಪೊಲೀಸ್ ಠಾಣೆಯ ಪಕ್ಕದ ಬಾರ್ ನಲ್ಲಿ ಎರಡು ಗುಂಪುಗಳ ಮಧ್ಯ ಮಾರಾಕಾಸ್ತ್ರಗಳಿಂದ ಮಾರಾಮಾರಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಲಾಂಗ್, ಕಬ್ಬಿಣ ಸಲಾಕೆ, ಬಡಿಗೆಯಿಂದ ಹೊಡೆದಾಡಿರುವ ಘಟನೆ ಜಿಲ್ಲೆಯ ರೋಣ ಪಟ್ಟಣದಲ್ಲಿ ಸೋಮವಾರ ಸಂಜೆ ನಡೆದಿದೆ.

ಪೊಲೀಸ್ ಠಾಣೆಯ ಪಕ್ಕದಲ್ಲಿರುವ ಕುಮಾರ ಬಾರ್‌ನಲ್ಲಿ ಮದ್ಯ ಪ್ರೀಯರು ಹಾಗೂ ಬಾರ್ ಸಪ್ಲಾಯರ್ ನಡುವೆ
ಮಾರಾಮಾರಿಯಾಗಿದೆ.

ಮದ್ಯವ್ಯಸನಿ ಗ್ರಾಹಕರು, ಪಾನಮತ್ತಿನಲ್ಲಿ ಟೇಬಲ್ ಬಡೆದಿದ್ದಾರೆ. ಆದರೆ, ಸಪ್ಲಾಯರ್‌ಗಳು ಬೇಗನೆ ಬಾರದಕ್ಕೆ ಪುನಃ ಜೋರಾಗಿ ಕೂಗಾಡಿದ್ದಾರೆ. ನಂತರ ಬಂದ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಆವೇಶದಲ್ಲಿ ಮದ್ಯ ಪ್ರೀಯರು ಹಾಗೂ ಬಾರ್ ಸಪ್ಲಾಯರ್ ಕಬ್ಬಿಣ ರಾಡ್, ಕಟ್ಟಿಗೆ ಹಾಗೂ ಲಾಂಗ್‌ನಿಂದ ಹೊಡೆದಾಡಲು ಆರಂಭಿಸಿದ್ದಾರೆ. ಈ ವೇಳೆ ಎರಡು ಗುಂಪಿನವರಿಗೂ ಗಾಯಗಳಾಗಿವೆ.

ವಿಷಯ ತಿಳಿದ ರೋಣ ಪೊಲೀಸರು ಎರಡೂ ಗುಂಪಿನವರನ್ನೂ ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here