HomeBelgaumಚುನಾವಣೆ ಗೆಲ್ಲುವುದಕ್ಕಿಂತ ನಮ್ಮ ಸಿದ್ಧಾಂತ ಗೆಲ್ಲಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಚುನಾವಣೆ ಗೆಲ್ಲುವುದಕ್ಕಿಂತ ನಮ್ಮ ಸಿದ್ಧಾಂತ ಗೆಲ್ಲಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಬೆಳಗಾವಿ: ಸಂವಿಧಾನ ದ್ವೇಷಿಯಾಗಿರುವ ಆರ್‌ಎಸ್‌ಎಸ್ ಸಿದ್ಧಾಂತವನ್ನು ಬಿಜೆಪಿಯು ಭಾರತೀಯರ ಮೇಲೆ ಹೇರುತ್ತಿದ್ದು, ಇದನ್ನು ಹಿಮ್ಮೆಟ್ಟಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಬೆಳಗಾವಿಯಲ್ಲಿ ಮಂಗಳವಾರ ಐತಿಹಾಸಿಕ ಜೈ ಬಾಪು-ಜೈ ಭೀಮ್-ಜೈ ಸಂವಿಧಾನ ಅಭಿಯಾನ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಿಜೆಪಿ ಪರಿವಾರ ಭಾರತದಲ್ಲಿ ಬಹಳ ವ್ಯವಸ್ಥಿತವಾಗಿ ಒಡಕು ತರುತ್ತಿದೆ. ಭಾರತೀಯರ ನಡುವೆ ಬಿರುಕು ಮೂಡಿಸುತ್ತಾ ಭಾರತವನ್ನು ದುರ್ಬಲಗೊಳಿಸುತ್ತಿದೆ. ಬಿಜೆಪಿಯ ಈ ಯತ್ನವನ್ನು ನಾವು ಸೋಲಿಸಬೇಕು. ಇದಕ್ಕೆ ಗಾಂಧಿ-ಅಂಬೇಡ್ಕರ್ ನಮಗೆ ಮಾರ್ಗದರ್ಶಕರು ಎಂದರು.

ಸಂವಿಧಾನ ಜಾರಿಯಾದಾಗ ಬಿಜೆಪಿ ಪರಿವಾರ ಅಂಬೇಡ್ಕರ್ ಭಾವಚಿತ್ರವನ್ನು, ಸಂವಿಧಾನವನ್ನು ಸುಟ್ಟಿತ್ತು. ಇದನ್ನು ಈ ದೇಶ, ಈ ದೇಶದ ಜನ ಸಮುದಾಯ ಯಾವತ್ತೂ ಕ್ಷಮಿಸುವುದಿಲ್ಲ, ಮರೆಯುವುದಿಲ್ಲ. ಬಿಜೆಪಿ ಪರಿವಾರ ಗಾಂಧಿ, ಅಂಬೇಡ್ಕರ್‌ರನ್ನು ದ್ವೇಷಿಸುತ್ತದೆ. ನಾವು ಇಬ್ಬರ ಆಶಯಗಳನ್ನೂ ಪೀಳಿಗೆಯಿಂದ ಪೀಳಿಗೆಗೆ ದಾಟಿಸುತ್ತೇವೆ, ವಿಸ್ತರಿಸುತ್ತೇವೆ ಎಂದರು.

ನಾವು ಸಂವಿಧಾನ ರಕ್ಷಿಸಿದರೆ ಅದೇ ಸಂವಿಧಾನ ನಮ್ಮೆಲ್ಲರನ್ನೂ ರಕ್ಷಿಸುತ್ತದೆ. ನಮಗೆ ಚುನಾವಣೆ ಗೆಲ್ಲುವುದಕ್ಕಿಂತ ನಮ್ಮ ಸಿದ್ಧಾಂತ ಗೆಲ್ಲಬೇಕು. ಅದು ಮಾತ್ರ ನಮ್ಮ ನಿಜವಾದ ಗೆಲುವು. ಗಾಂಧಿ, ಅಂಬೇಡ್ಕರ್ ಅವರ ಆಶಯಗಳು, ಮೌಲ್ಯಗಳ ಈಡೇರಿಕೆಗೆ ನಾವು ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದೇವೆ. ಇದಕ್ಕಾಗಿ ಬಜೆಟ್‌ನಲ್ಲಿ 52 ಸಾವಿರ ಕೋಟಿಗೂ ಅಧಿಕ ಮೊತ್ತದ ಹಣವನ್ನು ನೇರವಾಗಿ ಜನರ ಖಾತೆಗೆ ಹಾಕಿ ರಾಜ್ಯದ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸಿದ್ದೇವೆ ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!