ಭುವನೇಶ್ವರಿ ತಾಯಿಗೆ ನರೇಗಲ್ಲದಲ್ಲಿ ಭವ್ಯ ಸ್ವಾಗತ

0
???????
Spread the love

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: 10ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ನಿಮಿತ್ತ ಜಕ್ಕಲಿಯಿಂದ ನರೇಗಲ್ಲಿಗೆ ಆಗಮಿಸಿದ ತಾಯಿ ಭುವನೇಶ್ವರಿ ಮೆರವಣಿಗೆಗೆ ನರೇಗಲ್ಲದ ಕೆಇಬಿ ಕಚೇರಿ ಹತ್ತಿರ ಅದ್ಧೂರಿ ಸ್ವಾಗತ ಕೋರಲಾಯಿತು.

Advertisement

ಗಜೇಂದ್ರಗಡ ತಹಸೀಲ್ದಾರ ಕಿರಣಕುಮಾರ ಕುಲಕರ್ಣಿ, ಪ.ಪಂ ಅಧ್ಯಕ್ಷ ಫಕೀರಪ್ಪ ಮಳ್ಳಿ, ಉಪಾಧ್ಯಕ್ಷ ಕುಮಾರಸ್ವಾಮಿ ಕೋರಧಾನ್ಯಮಠ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಡಿ.ಎ. ಅರವಟಗಿಮಠ ಮತ್ತು ಡಾ. ಕೆ.ಬಿ. ಧನ್ನೂರ ಪೂಜೆ ಸಲ್ಲಿಸುವ ಮೂಲಕ ಸ್ವಾಗತ ಕೋರಿದರು.

ಜಕ್ಕಲಿ ಕ್ರಾಸ್ ಮೂಲಕ ಸಾಗಿದ ಮೆರವಣಿಗೆಯು ಹೊಸ ಬಸ್ ನಿಲ್ದಾಣ, ಪಟ್ಟಣ ಪಂಚಾಯಿತಿ, ಕೊಂತಿ ಮಲ್ಲಪ್ಪನ ಗುಡಿ, ಶ್ರೀ ವೀರಭದ್ರೇಶ್ವರ ದೇವಸ್ಥಾನ, ಶ್ರೀ ಗಜಾನನ ದೇವಸ್ಥಾನ, ಹಳೆ ಮಾರುಕಟ್ಟೆ, ದರಗಾ ಓಣಿ, ನಾಗರಕೆರೆ, ಮಾರೆಮ್ಮನ ಗುಡಿ, ಹಳೆ ಬಸ್ ನಿಲ್ದಾಣಕ್ಕೆ ಬಂದು ಗಜೇಂದ್ರಗಡದತ್ತ ಸಾಗಿತು.

ಮೆರವಣಿಗೆಯಲ್ಲಿ ಕಲಾ ತಂಡಗಳು, ಕರಡಿ ಮಜಲು, ಎಲ್ಲ ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕ ವೃಂದದವರು, ಪ.ಪಂ ಸದಸ್ಯರು, ಮುಖ್ಯಾಧಿಕಾರಿ ಮಹೇಶ ನಿಡಶೇಶಿ, ಜಿಲ್ಲಾ ಕಸಾಪ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ, ಹೋಬಳಿ ಘಟಕದ ಅಧ್ಯಕ್ಷ ಎಂ.ವಿ. ವೀರಾಪೂರ, ಜಿಲ್ಲಾ ಮತ್ತು ತಾಲೂಕು ಘಟಕಗಳ ಪದಾಧಿಕಾರಿಗಳು, ಸದಸ್ಯರು, ಬೀಚಿ ಬಳಗದ ಅಧ್ಯಕ್ಷ ಕೆ.ಎಸ್. ಕಳಕಣ್ಣವರ, ರವೀಂದ್ರನಾಥ ದೊಡ್ಡಮೇಟಿ, ನಿಂಗನಗೌಡ ಲಕ್ಕನಗೌಡ್ರ, ಎಂ.ಎಸ್. ದಢೇಸೂರಮಠ, ಶಿಕ್ಷಕ ಎಂ.ಕೆ. ಬೇವಿನಕಟ್ಟಿ ಮುಂತಾದವರಿದ್ದರು.


Spread the love

LEAVE A REPLY

Please enter your comment!
Please enter your name here