ವಿಜಯಸಾಕ್ಷಿ ಸುದ್ದಿ, ರೋಣ: ಗ್ರಾಮೀಣ ಭಾಗಗಳಲ್ಲಿ ಪಾಲಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಪುರಸಭೆಯ ಸದಸ್ಯ ಸಂಗನಗೌಡ ಪಾಟೀಲ ಹೇಳಿದರು.
ಅವರು ಚಿಕ್ಕಮಣ್ಣೂರ ಗ್ರಾಮದಲ್ಲಿ ಜರುಗಿದ ಅಂಗನವಾಡಿ ಕಟ್ಟಡ ಭೂಮಿಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಮಕ್ಕಳಿಗೆ ಗುಣಮಟ್ಟದ ಅಕ್ಷರ ಜ್ಞಾನ ಸಿಕ್ಕಾಗ ಮಾತ್ರ ಕುಟುಂಬಗಳು ಬಲವರ್ಧನೆ ಹೊಂದಲು ಸಾಧ್ಯ. ಮುಖ್ಯವಾಗಿ ಗ್ರಾಮ ಅಭಿವೃದ್ಧಿ ಪಥದಲ್ಲಿ ಸಾಗಲು ಅಕ್ಷರ ಜ್ಞಾನ ಮಹತ್ವ ಪಡೆಯುತ್ತದೆ. ಹೀಗಾಗಿ ಪಾಲಕರು ತಮ್ಮ ಮಕ್ಕಳಿಗೆ ಶಿಕ್ಷಣ ಒದಗಿಸಲು ಮುಂದಾಗಬೇಕು ಎಂದು ಕರೆ ನೀಡಿದರು.
ಸಿಡಿಪಿಒ ಪಂಚಾಕ್ಷರಯ್ಯ ಹಿರೇಮಠ ಭೂಮಿ ಪೂಜೆಯನ್ನು ನೆರವೇರಿಸಿದರು. ಇದೇ ಸಂದರ್ಭದಲ್ಲಿ ಗ್ರಾಮದ ಸ.ಹಿ.ಪ್ರಾ ಶಾಲೆಯ ಶಿಕ್ಷಕರು ಹಾಗೂ ಶಾಲಾ ಸಮಿತಿ ಪದಾಧಿಕಾರಿಗಳು, ಶಾಲಾ ಶತಮಾನೋತ್ಸವ ಕಾರ್ಯಕ್ರಮಕ್ಕೆ ಶಾಸಕರಿಂದ ಅಗತ್ಯ ನೆರವು ಒದಗಿಸಬೇಕು ಎಂದು ಮನವಿ ಸಲ್ಲಿಸಿದರು.
ಶಿವಪ್ಪ ಪಟ್ಟೇದ, ಹನ್ಮಂತಪ್ಪ ರಾಜಣ್ಣವರ, ಗೌಸಿದ್ದಪ್ಪ ಮಾದರ, ಪುಂಡಲೀಕ ವಾಲ್ಮೀಕಿ, ಶರಣಪ್ಪ ಕೊಟಗಿ ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.