ಬೆಂಗಳೂರು:- ಕರ್ನಾಟಕ ಮಾತ್ರವಲ್ಲದೇ ಇಡೀ ದೇಶದಲ್ಲೇ ಸದ್ದು ಮಾಡಿದ್ದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿತರಾಗಿದ್ದ CM ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರವಿಲ್ಲ. ಡಿ ನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಮುಡಾ ಹಗರಣದ ತನಿಖಾ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಕೋರ್ಟ್‌ಗೆ ಸಲ್ಲಿಕೆ ಮಾಡಲಿದ್ದಾರೆ. ಲೋಕಾಯುಕ್ತ ಎಸ್ಪಿ ಟಿಜೆ ಉದೇಶ್ ನೇತೃತ್ವದಲ್ಲಿ ತನಿಖೆ ನಡೆದು ವರದಿ ಸಿದ್ಧಪಡಿಸಲಾಗಿದೆ.
ಕೆಸರೆ ಜಮೀನು ಸರ್ವೇ ನಂ.464 ರ 3.16 ಎಕರೆ ಭೂಮಿ ಪರಿವರ್ತನೆಯ 14 ಸೈಟ್ ಗಳನ್ನ ಪಡೆದುಕೊಂಡ ನಿಯಮಾವಳಿಗಳ ಕುರಿತು ಎಲ್ಲಾ ಹಂತದಲ್ಲೂ ತನಿಖೆ ಮಾಡಲಾಗಿದೆ. ತನಿಖೆಯಲ್ಲಿ ಅಧಿಕಾರಿಗಳ ದೋಷಗಳು ಕಂಡು ಬಂದಿದೆ. ಸಿಎಂ ಹಾಗೂ ಅವರ ಪತ್ನಿಯಾಗಲಿ ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ ಎಂದು ಹೇಳಲಾಗಿದೆ ಎನ್ನಲಾಗಿದೆ. ಲೋಕಾಯುಕ್ತರು ಅಂತಿಮ ಹಂತದ ರಿಪೋರ್ಟ್ ರೆಡಿ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.