ರಾಜಧಾನಿಗೆ ಕಾಲಿಟ್ಟಿತಾ ಮಹಾಮಾರಿ!?: ಶಂಕಿತ ಮಂಕಿಪಾಕ್ಸ್ ಪ್ರಕರಣ ಪತ್ತೆ, ಸಿಟಿ ಮಂದಿ ಗಾಬರಿ!

0
Spread the love

ಬೆಂಗಳೂರು:- ಸಿಲಿಕಾನ್ ಸಿಟಿ ಮಂದಿಗೆ ಶಾಕಿಂಗ್ ಸುದ್ದಿಯೊಂದು ಬೆಚ್ಚಿಬೀಳಿಸಿದೆ. ದುಬೈನಿಂದ ಬೆಂಗಳೂರಿಗೆ ಬಂದ ವ್ಯಕ್ತಿಗೆ ಮಂಕಿಪಾಕ್ಸ್ ಸೋಂಕು ಪತ್ತೆಯಾಗಿದೆ ಎಂದು ಹೇಳಲಾಗುತ್ತಿದ್ದು, ಆದರೆ ಇನ್ನೂ ಇದು ಅಧಿಕೃತ ಆಗಿಲ್ಲ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವರದಿ ಬಂದ ಬಳಿಕ ಕನ್ಫರ್ಮ್ ಆಗಲಿದೆ.

Advertisement

ಹೌದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶಂಕಿತ ಮಂಕಿಪಾಕ್ಸ್ ಪ್ರಕರಣ ಬುಧವಾರ ತಡರಾತ್ರಿ ವರದಿಯಾಗಿದೆ. ಒಂದು ವೇಳೆ ಇದು ದೃಢಪಟ್ಟಲ್ಲಿ 2025ರಲ್ಲಿ ಕರ್ನಾಟಕದಲ್ಲಿ ಪತ್ತೆಯಾದ ಮೊದಲ ಮಂಕಿಪಾಕ್ಸ್ ಪ್ರಕರಣ ಇದಾಗಿರಲಿದೆ. ದುಬೈಗೆ ಪ್ರಯಾಣಿಸಿದ ಹಿನ್ನೆಲೆಯುಳ್ಳ 40 ವರ್ಷದ ವ್ಯಕ್ತಿ ಸೋಂಕಿತರಾಗಿದ್ದು, ಸದ್ಯ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿ ಆಗಿದೆ. ಶಂಕಿತ ಪ್ರಕರಣದ ಬಗ್ಗೆ ದೃಢೀಕರಿಸಿಕೊಳ್ಳಲು ಹೆಚ್ಚಿನ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.

ಭಾರತದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣವು 2024 ರ ಸೆಪ್ಟೆಂಬರ್​​​ನಲ್ಲಿ ವರದಿಯಾಗಿದೆ. ಕಳೆದ ತಿಂಗಳು, ಕೇರಳದಲ್ಲಿ ಎರಡು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿದ್ದವು.


Spread the love

LEAVE A REPLY

Please enter your comment!
Please enter your name here