ವಿಜಯಸಾಕ್ಷಿ ಸುದ್ದಿ, ಗದಗ: ಅಖಿಲ ಭಾರತ ಔಷಧ ವ್ಯಾಪಾರಸ್ಥರ ಸಂಘದ ಸುವರ್ಣ ಮಹೋತ್ಸವ ಸಂಭ್ರಮಾಚರಣೆಯ ಅಂಗವಾಗಿ ಜ. 24ರಂದು ದೇಶದಾದ್ಯಂತ ಏಕಕಾಲಕ್ಕೆ ಬೃಹತ್ ರಕ್ತದಾನ ಶಿಬಿರ ಏರ್ಪಡಿಸಲು ಕರೆನೀಡಿದ ಪ್ರಯುಕ್ತ ಗದಗ ಜಿಲ್ಲಾ ಔಷಧ ವ್ಯಾಪಾರಿಗಳ ಸಂಘವು ಜ. 24ರಂದು ಮುಂಜಾನೆ 10ರಿಂದ ಸಂಜೆ 5 ಗಂಟೆಯವರೆಗೆ ಕಳಸಾಪೂರ ರಿಂಗ್ ರಸ್ತೆ ಹತ್ತಿರದ ಸೇವಾಲಾಲ ನಗರದ ರೋಟರಿ ಗದಗ ಸೆಂಟ್ರಲ್ ಸಭಾಂಗಣದಲ್ಲಿ ಬೃಹತ್ ರಕ್ತದಾನ ಶಿಬಿರ ಏರ್ಪಡಿಸಿದೆ.
ಸಂಸದ ಬಸವರಾಜ ಬೊಮ್ಮಾಯಿ ಶಿಬಿರದ ಉದ್ಘಾಟನೆ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಗದಗ ಜಿಮ್ಸ್ ನಿರ್ದೇಶಕ ಬಸವರಾಜ ಬೊಮ್ಮನಹಳ್ಳಿ, ಗದಗ ವೃತ್ತದ ಸಹಾಯಕ ಔಷಧ ನಿಯಂತ್ರಕ ನೀಲಕಂಠ ರಾಠೋಡ, ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ತಾತನಗೌಡ ಪಾಟೀಲ ಆಗಮಿಸುವರು.
ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಮನಗೌಡ ದಾನಪ್ಪಗೌಡ್ರ ವಹಿಸುವರು. ಗದಗ ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ಸರ್ವ ಪದಾಧಿಕಾರಿಗಳು, ಸಮಸ್ತ ಸದಸ್ಯರು ಸೇರಿದಂತೆ ಜಿಲ್ಲೆಯ ಮಹಾಜನತೆ ಈ ಬೃಹತ್ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಸಂಘದ ಕಾರ್ಯದರ್ಶಿ ಜ್ಞಾನೇಶ್ವರ ಖೋಕಲೆ ವಿನಂತಿಸಿದ್ದಾರೆ.