ಬೆಂಗಳೂರು: ಯಾವುದೇ ಸಮಸ್ಯೆಯಾಗದಂತೆ ಗಣರಾಜ್ಯೋತ್ಸವ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದುಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಜನವರಿ 26ರ ಗಣರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ಧತೆಗಳು ನಡೆಯುತ್ತಿವೆ.
ರಾಜ್ಯಪಾಲರು ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ. 1051 ಪೊಲೀಸ್ ಅಧಿಕಾರಿಗಳು ಭದ್ರತೆಗೆ ನಿಯೋಜಿಸಲಾಗುತ್ತದೆ. ವಿವಿಧ ಬಣ್ಣದ ಪಾಸ್ಗಳ ಮೂಲಕ ಪ್ರವೇಶ ವ್ಯವಸ್ಥೆ ಮಾಡಲಾಗಿದೆ. ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಹೇಳಿದ್ದಾರೆ.
ಇನ್ನೂ ಕಲರ್ ಕೋಡ್ಗಳ ಮೂಲಕ ಪಾಸ್ ವಿತರಿಸಿ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಪಿಂಕ್ ಬಣ್ಣದ ಪಾಸ್ ನೀಡಲಾಗುತ್ತದೆ. ವಿಐಪಿ ಪಾಸ್ ಗೇಟ್-2ರ ಮೂಲಕ ಪ್ರವೇಶಿಸಬಹುದಾಗಿದೆ. ಮುಖ್ಯ ಅತಿಥಿಗಳು, ಗಣ್ಯರು ಗೇಟ್-3 ಮೂಲಕ ಪ್ರವೇಶಿಸಬಹುದು. ಗೇಟ್-4ರಲ್ಲಿ ಬಿಳಿ ಪಾಸ್ ನೀಡಲಾಗುತ್ತದೆ, ಇಲ್ಲಿ ಮಾಧ್ಯಮದವರಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ ಎಂದರು.