ಕಾಂತಾರ2, ಟಾಕ್ಸಿಕ್ ಸಿನಿಮಾದ ಎಫೆಕ್ಟ್: ಅರಣ್ಯದಲ್ಲಿ ಶೂಟಿಂಗ್ ಮಾಡುವವರಿಗೆ ಹೊಸ ಆದೇಶ ತಂದ ಸರ್ಕಾರ

0
Spread the love

ಅರಣ್ಯ ಪ್ರದೇಶದಲ್ಲಿ ಶೂಟಿಂಗ್ ಮಾಡುವ ವೇಳೆ ಕಾಂತಾರಾ ಹಾಗೂ ಟಾಕ್ಸಿಕ್ ಸಿನಿಮಾಗಳು ನಿಯಮವನ್ನು ಉಲ್ಲಂಘನೆ ಮಾಡಿವೆ ಎಂಬ ಆರೋಪಗಳು ಕೇಳಿ ಬಂದಿತ್ತು. ಇದನ್ನು ಗಂಭೀರವಾಗಿ ತೆಗೆದಕೊಂಡಿರುವ ರಾಜ್ಯ ಸರ್ಕಾರ ಇನ್ಮುಂದೆ ಅರಣ್ಯದಲ್ಲಿ ಶೂಟಿಂಗ್ ಮಾಡುವವರಿಗೆ ಹೊಸ ನಿಯಮ ಜಾರಿಗೆ ತಂದಿದೆ.

Advertisement

‘ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಸಿನಿಮಾ, ಧಾರಾವಾಹಿ, ಸಾಕ್ಷ್ಯಚಿತ್ರ ಇತ್ಯಾದಿಗಳನ್ನು ಚಿತ್ರೀಕರಿಸಲು ಶುಲ್ಕ ಪಡೆದು ಅನುಮತಿಸಲಾಗುತ್ತಿದೆ. ಪ್ರಸ್ತುತ ಅರಣ್ಯ ಪ್ರದೇಶದ ಚಿತ್ರೀಕರಣಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಅನುಮತಿ ನೀಡುತ್ತಿರುವುದು ಸರಿಯಷ್ಟೆ. ಇತ್ತೀಚಿನ ದಿನಗಳಲ್ಲಿ ಅರಣ್ಯ ಪ್ರದೇಶದ ಚಿತ್ರೀಕರಣದಿಂದಾಗಬಹುದಾದ ತೊಂದರೆಗಳು ಹಾಗೂ ಇದಕ್ಕೆ ಸಂಬಂಧಿಸಿದ ಅಪರಾಧಗಳ ಗಂಭೀರತೆ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಪ್ರಚುರಗೊಂಡಿರುವುದನ್ನು ಗಮನಿಸಲಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

‘ಅರಣ್ಯ ಪ್ರದೇಶಗಳಲ್ಲಿ ವಿವಿಧ ಬಗೆಯ ಚಿತ್ರೀಕರಣಕ್ಕೆ ಸ್ಥಳೀಯ ಮಟ್ಟದ ಅಧಿಕಾರಿಗಳು ಅನುಮತಿಯನ್ನು ನೀಡುತ್ತಿದ್ದಾರೆ. ಇದರಿಂದ ಅರಣ್ಯ ಪ್ರದೇಶದ ಗೌಪ್ಯ ಮಾಹಿತಿಯು ಹೊರ ಜಗತ್ತಿಗೆ ದೊರೆಯುವ ಸಂಭವವಿರುತ್ತದೆ. ಅರಣ್ಯ ಮತ್ತು ವನ್ಯಜೀವಿಗಳ ಸೂಕ್ಷ್ಮತೆಯ ಅರಿವಿಲ್ಲದೆ ಪರಿಸರ ಹಾಗೂ ಜೀವ ವೈವಿಧ್ಯಕ್ಕೆ ದಕ್ಕೆ ಉಂಟಾಗುವ ಸಂಭವವಿರುತ್ತದೆ’ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

‘ಅರಣ್ಯ ಹಾಗೂ ವನ್ಯ ಜೀವಿಗಳನ್ನು ಸಂರಕ್ಷಿಸಿ. ಮುಂದಿನ ಪೀಳಿಗೆಗೆ ಉತ್ತಮ ಪರಿಸರ, ಅರಣ್ಯ ಹಾಗೂ ವನ್ಯಜೀವಿಗಳನ್ನು ಉಳಿಸುವ ಹಿತದೃಷ್ಟಿಯಿಂದ, ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಯಾವುದೇ ಬಗೆಯ ಚಿತ್ರೀಕರಣಕ್ಕೆ ಕಡ್ಡಾಯವಾಗಿ ಸರ್ಕಾರದ ವತಿಯಿಂದ ಅನುಮತಿ ಪಡೆಯಬೇಕು’ ಎಂದು ಸರ್ಕಾರ ಆದೇಶದಲ್ಲಿ ಉಲ್ಲೇಖಿಸಲಾಗಿದೆ.


Spread the love

LEAVE A REPLY

Please enter your comment!
Please enter your name here