ಖೋ ಖೋ ವಿಶ್ವಕಪ್ ವಿಜೇತರಿಗೆ ಸನ್ಮಾನ: ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಬಹುಮಾನ!

0
Spread the love

ಬೆಂಗಳೂರು:- ಇತ್ತೀಚೆಗೆ ದೆಹಲಿಯ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಖೋ- ಖೋ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಅಂತಿಮ ಹಣಾಹಣಿಯಲ್ಲಿ ಭಾರತೀಯ ಪುರುಷರ ತಂಡ ನೇಪಾಳ ತಂಡವನ್ನು 54-36 ಅಂತರದಿಂದ ಸೋಲಿಸಿ ಚಾಂಪಿಯನ್ ಪಟ್ಟಕ್ಕೇರಿದರೆ, ಮಹಿಳೆಯರ ಫೈನಲ್​ನಲ್ಲಿ ಭಾರತ ಮಹಿಳಾ ತಂಡ ನೇಪಾಳ ತಂಡವನ್ನು 78-38 ಅಂಕಗಳಿಂದ ಮಣಿಸಿತು.

Advertisement

ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖೋ ಖೋ ವಿಶ್ವಕಪ್ ವಿಜೇತರಿಗೆ ಸನ್ಮಾನ ಮಾಡಿದ್ದಾರೆ. 2025ರ ಪುರುಷರ ಹಾಗೂ ಮಹಿಳಾ ಖೋ ಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಪ್ರಶಸ್ತಿ ಗೆದ್ದ ಭಾರತ ತಂಡಕ್ಕೆ ರಾಜ್ಯ ಸರ್ಕಾರ ಅಭಿನಂದನೆ ಸಲ್ಲಿಸಿದೆ.

ಇದೇ ವೇಳೆ ಎರಡೂ ವಿಭಾಗದಲ್ಲಿ ಭಾರತ ವಿಶ್ವ ಚಾಂಪಿಯನ್ ಆಗಲು ಕಾರಣರಾದ ಮಂಡ್ಯ ಜಿಲ್ಲೆಯ ಡಿ.ಮಲ್ಲಿಗೆರೆ ಗ್ರಾಮದ ಎಂ.ಕೆ ಗೌತಮ್ ಹಾಗೂ ಮೈಸೂರಿನ ತಿ.ನರಸೀಪುರದ ಕುರುಬೂರಿನ ಚೈತ್ರಾ ಅವರನ್ನು ಸರ್ಕಾರ ಗೌರವಿಸಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿಂದು ಕ್ರೀಡಾಪಟುಗಳಿಗೆ ಸನ್ಮಾನಿಸಿ ಗೌರವಿಸಿದರು. ಇಬ್ಬರೂ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಬಹುಮಾನ ಸಹ ಘೋಷಿಸಿದರು.


Spread the love

LEAVE A REPLY

Please enter your comment!
Please enter your name here