ಬೆಂಗಳೂರು: ಬಿಗ್ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಆಗಿದ್ದ, ಸಾಮಾಜಿಕ ಹೋರಾಟಗಾರನಾಗಿಯೂ ಗುರುತಿಸಿಕೊಂಡಿರುವ ಲಾಯರ್ ಜಗದೀಶ್ ಮೇಲೆ ಅಗಂತುಕ ಗುಂಪೊಂದು ದಾಳಿ ನಡೆಸಿದೆ. ದಾಳಿಯಲ್ಲಿ ಜಗದೀಶ್ಗೆ ಗಾಯಗಳಾಗಿವೆ, ಅವರ ಪುತ್ರನ ಮೇಲೂ ಹಲ್ಲೆ ಆಗಿದೆ ಎಂದು ರಕ್ತ ಒರಸುತ್ತಿದ್ದ ಸ್ಥಿತಿಯಲ್ಲಿಯೇ ಲಾಯರ್ ಜಗದೀಶ್ ಲೈವ್ ಬಂದು ಆರೋಪ ಮಾಡಿದ್ದರು.
Advertisement
ಅದಲ್ಲದೆ ನಿನ್ನೆ ನಡೆದ ಗಲಾಟೆಯಲ್ಲಿ ಅವರ ಗನ್ಮ್ಯಾನ್ ಕಾನೂನು ಬಾಹಿರವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಈ ಸಂಬಂಧ ತೇಜಸ್ ಎಂಬುವರು ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು.
ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಕೀಲ ಜಗದೀಶ್ ಮತ್ತು ಅವರ ಗನ್ ಮ್ಯಾನ್ನನ್ನು ಬಂಧಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಮಾತ್ರ ಬಳಸಲು ಲೈಸೆನ್ಸ್ ಪಡೆದು, ಕರ್ನಾಟಕದಲ್ಲಿ ಫೈರಿಂಗ್ ಮಾಡಿದ ಹಿನ್ನಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.