ಹುಬ್ಬಳ್ಳಿ: ಮೈಕ್ರೋ ಫೈನಾನ್ಸ್ ಜನರ ಜೀವ ಹಿಂಡುತ್ತಿದ್ದು, ಮರಣ ಶಾಸನ ಬರೆಯುತ್ತಿವೆ. ಕರ್ನಾಟಕದಲ್ಲಿ ಸಾಲ ಕೊಟ್ಟವರ ಕಾಟಕ್ಕೆ ಐವರು ಬಲಿಯಾಗಿದ್ದಾರೆ. ಇನ್ನೂ ಈ ವಿಚಾರವಾಗಿ ರಾಜ್ಯ ಸರ್ಕಾರದ ಭ್ರಷ್ಟಾಚಾರವೇ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಾರಣ ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಭ್ರಷ್ಟಾಚಾರವೇ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಾರಣ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಮೈಕ್ರೋ ಫೈನಾನ್ಸ್ ನಿಂದ ಜನ ಊರು ಬಿಡ್ತಿದ್ದಾರೆ.
ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ವಿಧಾನಸೌಧದಲ್ಲಿ ಮೀಟಿಂಗ್ ಮಾಡಿದ್ರೆ ಕಿರುಕುಳ ನಿಲ್ಲಲ್ಲ. ಸರ್ಕಾರದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ, ಮೊದಲು ಅದನ್ನು ನಿಲ್ಲಿಸಬೇಕು. ಹುಬ್ಬಳ್ಳಿಯಲ್ಲಿ ಪ್ರತಿಯೊಂದು ಕಾಲೇಜ್‌ನಲ್ಲಿ ಡ್ರಗ್ಸ್ ಸಿಗುತ್ತಿದೆ. ಚಾಕು-ಚೂರಿ ಹೆಚ್ಚಾಗಿವೆ ಎಂದು ಅರವಿಂದ್ ಬೆಲ್ಲದ್ ಬೇಸರ ಹೊರಹಾಕಿದರು.