ನವದೆಹಲಿ:- 76ನೇ ಗಣರಾಜ್ಯೋತ್ಸವ ಹಿನ್ನೆಲೆ ನವದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದರು.
ಈ ವೇಳೆ ರಾಷ್ಟ್ರಪತಿಗಳಿಗೆ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧನಕರ್ ಸಾಥ್ ನೀಡಿದರು. ನಂತರ ಭವ್ಯ ಮೆರವಣಿಗೆ ಪ್ರಾರಂಭವಾಯಿತು. ಸಮಾರಂಭದಲ್ಲಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದರು.
ಇದೇ ವೇಳೆ ದೇಶವನ್ನ ಉದ್ದೇಶಿಸಿ ಭಾಷಣ ಮಾಡಿದ ಮುರ್ಮು ಅವರು, ಇತ್ತೀಚಿನ ವರ್ಷಗಳಲ್ಲಿ ಆರ್ಥಿಕ ಬೆಳವಣಿಗೆ ನಿರಂತರ ಏರಿಕೆಯಾಗುತ್ತಿದ್ದು, ಇದು ಯುವಕರಿಗೆ ಹೆಚ್ಚು ಉದ್ಯೋಗಾವಕಾಶ ಸೃಷ್ಟಿಸಿದೆ. ರೈತ ಹಾಗೂ ಕಾರ್ಮಿಕ ವರ್ಗದವರಿಗೆ ಹೆಚ್ಚು ಹಣವನ್ನು ನೀಡುವ ಮೂಲಕ ಬಡತನವನ್ನು ನಿರ್ಮೂಲನೆಗೊಳಿಸಲು ಸಹಕರಿಸುತ್ತಿದೆ ಎಂದು ಹೇಳಿದ್ದಾರೆ.
ಇಸ್ರೋ ಸಾಧನೆಗೆ ಶ್ಲಾಘನೆ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ತನ್ನ ಇತ್ತೀಚಿನ ಸಾಧನೆ ಬಾಹ್ಯಾಕಾಶ ಡಾಕಿಂಗ್‌ನಿಂದ ದೇಶಕ್ಕೆ ಮತ್ತಷ್ಟು ಗೌರವ ತಂದಿದೆ. ಈ ಸಾಧನೆ ಮಾಡಿದ 4ನೆ ರಾಷ್ಟ್ರ ಭಾರತ ವಾಗಿದೆ ಎಂದು ಮುರ್ಮು ಇಸ್ರೋ ಸಾಧನೆ ಯನ್ನು ಶ್ಲಾಘಿಸಿದರು.
ಇದೇ ವೇಳೆ 2024ರಲ್ಲಿ ದೇಶದ ಕ್ರೀಡಾ ಸಾಧನೆ, ಪರಿಸರ ಸಂರಕ್ಷಣ ಪ್ರಯತ್ನ, ಪ್ರಸ್ತುತ ನಡೆಯುತ್ತಿರುವ ಮಹಾ ಕುಂಭಮೇಳದ ಬಗ್ಗೆ ಮುರ್ಮು ಉಲ್ಲೇಖಿಸಿದರು.