Rajanna: ಮುಡಾ ಪ್ರಕರಣ ಬಿಜೆಪಿಯ ಸೃಷ್ಟಿ ಅಷ್ಟೇ: ಸಚಿವ ರಾಜಣ್ಣ!

0
Spread the love

ಹಾಸನ:- ಕರ್ನಾಟಕ ಅಲ್ಲದೇ ದೇಶದಾದ್ಯಂತ ಸದ್ದು ಮಾಡಿದ ಮುಡಾ ಪ್ರಕರಣ ಬಿಜೆಪಿಯ ಸೃಷ್ಟಿ ಅಷ್ಟೇ ಎಂದು ಸಚಿವ ರಾಜಣ್ಣ ಹೇಳಿಕೆ ಕೊಟ್ಟಿದ್ದಾರೆ.

Advertisement

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಮುಡಾ ಪ್ರಕರಣ ಬಿಜೆಪಿಯ ಸೃಷ್ಟಿ ಅಷ್ಟೇ. ಸಿಎಂ ಆಗಿರೋರಿಗೆ ಮೂರ‍್ನಾಲ್ಕು ಸೈಟ್ ಯಾವ ಲೆಕ್ಕ ಹೇಳಿ. ಯಾರು ದೂರು ಕೊಟ್ಟು ಹೇಳಿಕೆ ಕೊಡ್ತಿದ್ದಾರೋ ಅವರದ್ದೇ ಪಾತ್ರ ಇದ್ದಂತಿದೆ. ಇನ್ನು ಸ್ವಲ್ಪದಿನ, ಎಲ್ಲವೂ ಆಚೆ ಬರುತ್ತದೆ ಎಂದರು. ಯಾರದ್ದು ಎಷ್ಟು ಸೈಟು ಇದೆ, ಎಲ್ಲವೂ ಆಚೆ ಬರುತ್ತೆ. ಮುಡಾ ಇರಲಿ, ಬಿಡಿಎ ಇರಲಿ, ಎಲ್ಲೇ ಕಾನೂನು ಬಾಹಿರ ಚಟುವಟಿಕೆ ಆಗಿದ್ದರೂ ಶಿಕ್ಷೆ ಆಗಬೇಕು. ಸಾರ್ವಜನಿಕ ಆಸ್ತಿಯನ್ನು ಯಾರೇ ಲಪಟಾಯಿಸಿದ್ರೂ ಅದು ಮೋಸದ ಕೆಲಸ. ಹಾಗೆ ಮಾಡಿದವರಿಗೆ ಶಿಕ್ಷೆಯಾಗಬೇಕು ಅನ್ನುವವನು ಅಂತ ಸಚಿವರು ಹೇಳಿದ್ದಾರೆ.

ಇನ್ನೂ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ವಿಚಾರವಾಗಿ ಮಾತನಾಡಿ, ಹೀಗೆ ಕಿರುಕುಳ ಕೊಡೋರಿಗೆ ಕಠಿಣ ಶಿಕ್ಷೆ ಆಗಬೇಕು. ಹಾಸನ ಜಿಲ್ಲೆಯಲ್ಲೂ ಈ ಸಮಸ್ಯೆ ಸಾಕಷ್ಟಿದೆ. ಕೆಲ ಸಂಸ್ಥೆಗಳು ಆರ್‌ಬಿಐ ಅನುಮತಿ ಪಡೆದು ಫೈನಾನ್ಸ್‌ ನಡೆಸುತ್ತಾರೆ. ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ಕೊಟ್ಟಾಗ ನಾವು ಕ್ರಮ ಕೈಗೊಳ್ಳಬಹುದು. ಹಾಗಾಗಿ ಸಿಎಂ ಸಭೆ ಮಾಡಿ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ. ಇಂತಹ ಕಿರುಕುಳ ತಡೆಗೆ ಹೊಸ ಕಾಯ್ದೆ ತರುವ ಬಗ್ಗೆಯೂ ಚರ್ಚೆ ಆಗಿದೆ ಎಂದರು.


Spread the love

LEAVE A REPLY

Please enter your comment!
Please enter your name here