ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ
ತಾಲೂಕು ಉಪ್ಪಾರ ಸಂಘ, ಉಪ್ಪಾರ ನೌಕರರ ಸಂಘ ಹಾಗೂ ಉಪ್ಪಾರ ಯುವಕರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 02-04-2021 ಶುಕ್ರವಾರ ಬೆಳಿಗ್ಗೆ 10-30 ಕ್ಕೆ ಉಪ್ಪಾರ ಸಮುದಾನ ಭವನ ಉಪ್ಪಾರ ಗೇರಿಯಲ್ಲಿ 2019-2020 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿ ಯು ಸಿ ಯಲ್ಲಿ ಶೇ 85 ಕ್ಕಿಂತ ಅಧಿಕ ಅಂಕ ಪಡೆದ ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ನೂತನವಾಗಿ ಗ್ರಾಮ ಪಂಚಾಯತಿಗೆ ಆಯ್ಕೆ ಯಾದ ಸದಸ್ಯರಿಗೆ ಸನ್ಮಾನ ಹಾಗೂ ಬಡ್ತಿ ಮತ್ತು ನಿವೃತ್ತಿ ಹೊಂದಿದ ನೌಕರರಿಗೆ ಮತ್ತು ವಿಶೇಷ ಸಾಧಕರಿಗೆ ಸನ್ಮಾನ ಕೋವಿಡ್-19 ಕರೋನ ವೈರಸ್ ಗೆ ತುತ್ತಾದ ನೌಕರರ ಕುಟುಂಬಸ್ಥರಿಗೆ ಗೌರವ ಸರ್ಮಪಣ ಕಾರ್ಯಕ್ರಮವಿದೆ.
ಕಾರ್ಯಕ್ರಮದ ದಿವ್ಯ ಸಾನಿಧ್ಯ ಶ್ರೀಮದ್ ಜಗದ್ಗುರು ಚಿನ್ಮೂಲಾದ್ರಿ ಶಿಲಾ ಪುರಿ ಸೂರ್ಯ ಸಿಂಹಾಸನಾಧೀಶ ಡಾ, ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು ಶ್ರೀ ಭಗೀರಥ ಪೀಠ ವಹಿಸುವರು.
ಕಾರ್ಯಕ್ರಮ ಶಾಸಕ ಜಿ, ಕರುಣಾಕರರೆಡ್ಡಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ತಾಲೂಕು ಉಪ್ಪಾರ ಸಂಘದ ಅಧ್ಯಕ್ಷ ಜಿ ಹನುಮಂತಪ್ಪ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕ ಸಿ ಪುಟ್ಟರಂಗಶೆಟ್ಟಿ, ಹಾಗೂ ರಾಜ್ಯಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ ಕೆ ಗಿರೀಶ್ ಉಪ್ಪಾರ, ಸೇರಿದಂತೆ ಗಣ್ಯರು, ಸಾಹಿತಿಗಳು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ತಾಲೂಕಿನ ಸಮಾಜ ಭಾಂದವರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಾಲೂಕು ಉಪ್ಪಾರ ಸಮಾಜದ ಮುಖಂಡರು ತಿಳಿಸಿದ್ದಾರೆ.