ಮೈಕ್ರೋ ಫೈನಾನ್ಸ್ ಕಿರುಕುಳ: ವಿಷದ ಮಾತ್ರೆ ನುಂಗಿ ಮಹಿಳೆ ಆತ್ಮಹತ್ಯೆ!

0
Spread the love

ಮೈಸೂರು:- ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದಲ್ಲಿ ವಿಷದ ಮಾತ್ರೆಗಳನ್ನು ನುಂಗಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ. ಫೈನಾನ್ಸ್ ನಿಂದ ಹಣ ಪಡೆದಿದ್ದ ಮಹಿಳೆಯು ಸಾಲ ತೀರಿಸಲಾಗದೆ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Advertisement

53 ವರ್ಷದ ಜಯಶೀಲಾ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಈಕೆ ಐಐಎಫ್‌ಎಲ್, ಫೈವ್ ಸ್ಟಾರ್ ಮೈಕ್ರೋ ಫೈನಾನ್ಸ್‌ನಲ್ಲಿ ಮನೆ, ವ್ಯವಸಾಯ ಹಾಗೂ ಹಸು ಸಾಕಾಣಿಕೆಗಾಗಿ 5 ಲಕ್ಷ ಸಾಲ ಪಡೆದಿದ್ದರು. ಪ್ರತಿ ತಿಂಗಳು 20,000ಕ್ಕೂ ಹೆಚ್ಚು ಇಎಂಐ ಕಟ್ಟಬೇಕಾಗಿತ್ತು. ಸಾಲದಲ್ಲಿ ತೆಗೆದುಕೊಂಡಿದ್ದ ಹಸು ಕೂಡ ಇತ್ತೀಚೆಗೆ ಮೃತಪಟ್ಟಿತ್ತು. ಈ ಹಿನ್ನೆಲೆ ಜೀವನ ನಿರ್ವಹಣೆ ಮಾಡಲು ಸಾಧ್ಯವಾಗದ ಪರಿಸ್ಥಿತಿಗೆ ತಲುಪಿದ್ದರು. ಈ ಹಿನ್ನೆಲೆ ಸಮೀಪದ ಹುಲ್ಲಹಳ್ಳಿಗೆ ತೆರಳಿ ವಿಷದ ಮಾತ್ರೆಗಳನ್ನು ತಂದು ಜಮೀನಿನಲ್ಲಿ ನುಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.


Spread the love

LEAVE A REPLY

Please enter your comment!
Please enter your name here