ದಾವಣಗೆರೆ: ಖಾಸಗಿ ಫೈನಾನ್ಸ್ ಕಾಟ ಹಾಗೂ ಸಾಲಕ್ಕೆ ಹೆದರಿ ನದಿಗೆ ಹಾರಿ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊನ್ನಾಳಿ ಪಟ್ಟಣದ ರಾಘವೇಂದ್ರ ಮಠದ ಮುಂಭಾಗವಿರುವ ತುಂಗಾಭದ್ರ ನದಿಯಲ್ಲಿ ನಡೆದಿದೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹೊನ್ನಾಳಿ ಪಟ್ಟಣದ ನಿವಾಸಿಯಾಗಿದ್ದ ಸರ್ಕಾರಿ ಶಾಲೆ ಶಿಕ್ಷಕಿ ಪುಷ್ಪಲತ (46) ಅತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ ಎಂದು ಗುರುತಿಸಲಾಗಿದೆ.
ಹೊನ್ನಾಳಿ ತಾಲೂಕಿನ ತಿಮ್ಮೇನಹಳ್ಳಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ಯಾಗಿದ್ದ ಪುಷ್ಪಲತಾ ಅವರು, ಹೊನ್ನಾಳಿ ಪಟ್ಟಣದಲ್ಲಿ ಮನೆ ಕಟ್ಟಲು ಶಿವಮೊಗ್ಗ ಮೂಲದ ಖಾಸಗಿ ಮೈಕ್ರೋ ಫೈನಾನ್ಸ್ ಹಾಗೂ ಕೈಗಡವಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರು. ಕಳೆದ 20 ದಿನಗಳ ಹಿಂದೆ ಪುಷ್ಪಲತ ದಂಪತಿ ವಿರುದ್ದ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಅದಲ್ಲದೆ ಹೊನ್ನಾಳಿ ಠಾಣೆ ಪೊಲೀಸರು ಪೈನಾನ್ಸ್ ಕಂಪನಿಯಿಂದ ಮುಚ್ಚಳಿಕೆ ಪತ್ರ ಬರೆಸಿಕೊಂಡಿದ್ದರು. ಆದ್ರೆ ಇಂದು ತುಂಗಾಭದ್ರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ವಿಷಯ ತಿಳಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಶಿಕ್ಷಕಿಯ ಮೃತದೇಹ ಹುಡುಕಾಟ ನಡೆಸುತ್ತಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.