ಬೆಂಗಳೂರು:- ಇಡಿ ನೋಟಿಸ್ ಸಿದ್ದರಾಮಯ್ಯಗೆ ದೊಡ್ಡ ಆಘಾತ ತಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ BY ವಿಜಯೇಂದ್ರ ಹೇಳಿದ್ದಾರೆ.
Advertisement
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ BY ವಿಜಯೇಂದ್ರ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದಿಂದ `ಬಿ’ ರಿಪೋರ್ಟ್ ತೆಗೆದುಕೊಂಡು ಬರುವ ಲೆಕ್ಕಾಚಾರದಲ್ಲಿ ಸಿಎಂ ಇರುವಾಗ ಇಡಿಯಿಂದ ನೋಟಿಸ್ ಕೊಡಲಾಗಿದೆ. ಅವರ ಧರ್ಮಪತ್ನಿಯವರಿಗೆ ಹಾಗೂ ಬೈರತಿ ಸುರೇಶ್ ಅವರಿಗೆ ಇಡಿ ನೋಟಿಸ್ ಕೊಡಲಾಗಿದೆ. ಇವರಿಬ್ಬರು ತನಿಖೆಯಿಂದ ತಪ್ಪಿಸಿಕೊಳ್ಳಲು ಆಗುವುದಿಲ್ಲ.
ಇಡಿ ನೋಟಿಸ್ ಸಿದ್ದರಾಮಯ್ಯರಿಗೆ ದೊಡ್ಡ ಆಘಾತ ತಂದಿದೆ. ಆದರೆ ಇಡಿ ನೋಟಿಸ್ ಕೊಟ್ಟಿರೋದು ಡಿಕೆ ಶಿವಕುಮಾರ್ಗೆ ಒಳಗೊಳಗೇ ಸಂತಸ ತಂದಿದೆ. ಇದರಲ್ಲಿ ಅಚ್ಚರಿ ಏನಿಲ್ಲ. ನಾನು ಡಿಕೆಶಿ ಅವರ ಹೇಳಿಕೆಯನ್ನು ಗಮನಿಸಿದೆ. ಡಿಕೆಶಿ ಮುಖದಲ್ಲಿ ಮಂದಹಾಸ ಕಾಣ್ತಿತ್ತು ಎಂದು BY ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ.