ತುಮಕೂರು:- ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿರುಮಣಿ ಬಳಿ ಸೋಲಾರ್ ಪಾರ್ಕ್ ನಿರ್ಮಾಣ ವೇಳೆ ಅವಘಡ ಸಂಭವಿಸಿದ್ದು, ಬಂಡೆ ಸ್ಪೋಟಗೊಂಡು ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಜರುಗಿದೆ. ಹಾಗೂ ಮತ್ತೋರ್ವರಿಗೆ ಗಂಭೀರ ಗಾಯವಾಗಿದೆ.
46 ವರ್ಷದ ಬಸವರಾಜ್ ಮೃತ ಕಾರ್ಮಿಕ ಎಂದು ಗುರುತಿಸಲಾಗಿದೆ. ಮತ್ತೋರ್ವ ಶಿವಯ್ಯ ಎಂಬ ಕಾರ್ಮಿಕ ಗಂಭೀರ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ಇನ್ನೂ ಬಂಡೆಯನ್ನು ಸ್ಫೋಟಿಗೊಳಿಸಲು ಅಕ್ರಮವಾಗಿ ಸ್ಫೋಟಕ ವಸ್ತುಗಳನ್ನು ಬಳಸಿರುವ ಶಂಕೆ ವ್ಯಕ್ತವಾಗಿದೆ. ತಿರುಮಣಿ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರಿಂದ ಎಲ್ಲಾ ಆಯಾಮದಲ್ಲೂ ತನಿಖೆ ಮುಂದುವರಿದಿದೆ.



