ಮಂಡ್ಯ: ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ಹೆಚ್ಚಾಗಿದ್ದು, ಸಾಲ ವಾಪಸು ಮಾಡಲು ವಿಳಂಬವಾದರೆ ಅವುಗಳು ನೀಡುವ ಕಿರುಕುಳದಿಂದ ಜನರು ಆತ್ಮಹತ್ಯೆ ಮಾಡಿಕೊಳ್ಳುವುದು, ಮನೆ ಬಿಟ್ಟು ಪರಾರಿಯಾಗುವಂಥ ಘಟನೆಗಳು ನಡೆಯುತ್ತಿವೆ. ಕುಟುಂಬಗಳನ್ನು ಬೀದಿಗೆ ತಳ್ಳುವಂಥ ಘಟನೆಗಳು ವ್ಯಾಪಕವಾಗಿವೆ. ಇದೀಗ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದೆ.
ಹೌದು ನಿನ್ನೆ ಮಂಡ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು 59 ವರ್ಷದ ಮಹಿಳೆಯೊಬ್ಬರು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮುಂಜಾನೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮಳವಳ್ಳಿಯ ಕೊನ್ನಾಪುರ ಗ್ರಾಮದ ಪ್ರೇಮಾ (59) ಮೃತ ದುರ್ಧೈವಿಯಾಗಿದ್ದು,
ಚನ್ನಪಟ್ಟಣದ ಉಜ್ಜೀವನ್ ಬ್ಯಾಂಕ್ ನಿಂದ 6 ಲಕ್ಷ ರೂ. ಸಾಲ ಪಡೆದಿದ್ದರು. ಸಾಲದ ಕಂತು ಕಟ್ಟದ ಹಿನ್ನೆಲೆಯಲ್ಲಿ ಉಜ್ಜೀವನ್ ಬ್ಯಾಂಕ್ ಸಿಬ್ಬಂದಿ ಮನೆಯನ್ನು ಸೀಜ್ ಮಾಡಿದ್ದರು. ಹೀಗಾಗಿ ನೋಂದ ಮಹಿಳೆ ಪ್ರೇಮಾ ಅವರು ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಅವರನ್ನು ಮಂಡ್ಯದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಆದರೆ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ.