ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಕಳೆದು 2 ವಾರಗಳಿಂದ ವಿಶ್ವದ ಅತಿದೊಡ್ಡ ಧಾರ್ಮಿಕ ಸಮಾರಂಭ ಮಹಾಕುಂಭಮೇಳ ನಡೆಯುತ್ತಿದೆ. ಇನ್ನು ಪ್ರಯಾಗ್‌ರಾಜ್‌ನಲ್ಲಿ ಭಕ್ತರ ಸಂಖ್ಯೆ ಹೆಚ್ಚಾದ ಹಿನ್ನಲೆ ಕಾಲ್ತುಳಿತ ಉಂಟಾಗಿದೆ. ಕಾಲ್ತುಳಿತ ಸಂಭವಿಸಿ 15 ಭಕ್ತರು ಜೀವ ಕಳೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನೂ ಈ ಘಟನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಅವರು ಪೋಸ್ಟ್ ಮಾಡಿದ್ದಾರೆ. ಪೋಸ್ಟ್‌ನಲ್ಲಿ ಮೃತರ ಆತ್ಮಗಳಿಗೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಕಾಲ್ತುಳಿತದಲ್ಲಿ ರಾಜ್ಯದ ಕೆಲವರು ಗಾಯಗೊಂಡಿರುವ ಮಾಹಿತಿಯಿದೆ. ಅವರೆಲ್ಲರನ್ನು ಕ್ಷೇಮವಾಗಿ ರಾಜ್ಯಕ್ಕೆ ಕರೆತರಲು ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ನಮ್ಮವರ ರಕ್ಷಣೆಗೆ ಸರ್ಕಾರ ಎಲ್ಲಾ ರೀತಿಯ ಪ್ರಯತ್ನವನ್ನು ನಡೆಸುತ್ತಿದೆ. ಕುಂಭಮೇಳದಲ್ಲಿ ಪಾಲ್ಗೊಂಡಿರುವ ಕನ್ನಡಿಗರು ಸ್ವಲ್ಪ ಜಾಗರೂಕತೆಯಿಂದಿರಿ ಎಂದು ಮನವಿ ಮಾಡಿಕೊಂಡಿದ್ದಾರೆ.