ಅಂತರ್ಜಾತಿ ವಿವಾಹ: 2019ರಲ್ಲಿ ನಡೆದಿದ್ದ ಜೋಡಿ ಕೊಲೆ ಸಾಬೀತು- ನಾಲ್ವರಿಗೆ ಮರಣದಂಡನೆ!

0
Spread the love

ಗದಗ:- 2019 ರಲ್ಲಿ ಪ್ರೀತಿಸಿ ಮದುವೆ ಆಗಿದ್ದ ಜೋಡಿಯನ್ನು ನಡುಬೀದಿಯಲ್ಲಿ ಚಾಕು ಚೂರಿ ಕಲ್ಲು ದೊಣ್ಣೆಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು. ಇದೀಗ ಈ ಆರೋಪ ಸಾಬೀತಾಗಿರುವ ಹಿನ್ನೆಲೆ ನಾಲ್ವರು ಆರೋಪಿಗಳಿಗೆ ಮರಣದಂಡನೆ ವಿಧಿಸಿ ಗದಗ ಜಿಲ್ಲಾ & ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

Advertisement

ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದ ರಮೇಶ ಮಾದರ ಮತ್ತು ಗಂಗಮ್ಮ ಅವರು ಮನೆಯವರ ವಿರೋಧದ ನಡುವೆಯೂ 2019ರಲ್ಲಿ ಪ್ರೀತಿ ಮಾಡಿ ಅಂತರ್ಜಾತಿ ಮದುವೆ ಆಗಿದ್ದರು. ಅಂತರ್ಜಾತಿ ವಿವಾಹ ಆಗಿದ್ದಕ್ಕೆ ಗಂಗಮ್ಮ ಅವರನ್ನು 2019ರಲ್ಲಿ ಗಂಗಮ್ಮ ಸಂಬಂಧಿಕರು ಕಲ್ಲು, ಬಡಿಗೆ ಹಾಗೂ ಚಾಕುವಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದರು.

ಕುಟುಂಬಸ್ಥರ ವಿರೋಧ ನಡುವೆ ಗಂಗಮ್ಮ ಪ್ರೀತಿಸಿ ಅಂತರ್ಜಾತಿ ವಿವಾಹ ಆಗಿದ್ದಕ್ಕೆ ಗಂಗಮ್ಮ ಸಂಬಂಧಿಕರು ಕೊಲೆ ಮಾಡಿದ್ದರು. ಈ ಕುರಿತು ಗಜೇಂದ್ರಗಡ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಐಪಿಸಿ ಸೆಕ್ಷನ್ 427, 449, 302, 506(2) ಸೇರಿದಂತೆ ವಿವಿಧ ಸೆಕ್ಷನ್ ಅಡಿಯಲ್ಲಿ ನ್ಯಾಯಾಲಕ್ಕೆ ಪೊಲೀಸರು ದೋಷಾರೋಪಣೆ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಜಿಲ್ಲಾ ನ್ಯಾಯಾಲಯವು ಆರೋಪಿಗಳಾದ ಶಿವಪ್ಪ ರಾಠೋಡ, ರವಿಕುಮಾರ ರಾಠೋಡ, ರಮೇಶ ರಾಠೋಡ ಹಾಗೂ ಸಾರಿಗೆ ಇಲಾಖೆ ಚಾಲಕನಾಗಿರುವ ಪರಶುರಾಮ ರಾಠೋಡ ಮೇಲಿನ ಅಪರಾಧ ಸಾಬೀತಾದ ಹಿನ್ನೆಲೆ ಬುಧವಾರ ಮರಣದಂಡನೆ ವಿಧಿಸಿ ಆದೇಶಿಸಿದೆ.

ಪ್ರಧಾನ ಸರಕಾರಿ ಅಭಿಯೋಜಕಿ ಸವಿತಾ ಶಿಗ್ಲಿ ಸರಕಾರದ ಪರವಾಗಿ ವಾದ ಮಂಡಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here