ಬೆಂಗಳೂರು:- ಸಿಸಿಬಿ ಪೊಲೀಸರು ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ದಾಳಿ ಮಾಡಿದ್ದಾರೆ. ದಾಳಿ ವೇಳೆ ನಾಲ್ವರನ್ನು ರಕ್ಷಿಸಿ, 9 ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.
ಆರೋಪಿಗಳು, ಹೊರ ರಾಜ್ಯದಿಂದ ಕೆಲಸಕ್ಕೆ ಬರುವ ಯುವತಿಯರನ್ನೇ ಗುರಿಯಾಗಿಸಿಕೊಂಡಿದ್ದರು. ಅವರಿಗೆ ಕೆಲಸದ ಆಸೆ ತೋರಿಸಿ ವೇಶ್ಯಾವಾಟಿಕೆ ದಂಧೆಗೆ ದೂಡುತ್ತಿದ್ದರು. ಅಲ್ಲದೇ ಈ ದಂಧೆಗೆ ಬಿಇಎಲ್ ಬಡಾವಣೆಯಲ್ಲಿ ಹೈಫೈ ಮನೆ ಬಾಡಿಗೆ ಪಡೆದಿದ್ದರು ಎನ್ನಲಾಗಿದೆ. ಗಿರಾಕಿಗಳನ್ನು ಫೋನ್ ಮೂಲಕ ಸಂಪರ್ಕಿಸುತ್ತಿದ್ದ ಆರೋಪಿಗಳು, ಅವರನ್ನು ಮನೆಗೆ ಕರೆಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎಂದು ಪೊಲೀಸ್ ಮೂಲಗಳು ಹೇಳಿವೆ.
ಬೆಂಗಳೂರಿನ ಅನೇಕ ಭಾಗಗಳಲ್ಲಿ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ದಾಳಿ ನಡೆಸಲಾಗಿದೆ. ಸಂಪಿಗೆಹಳ್ಳಿ, ಕೆಆರ್ ಪುರಂ, ರಾಮಮೂರ್ತಿನಗರ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಲಾಗಿದ್ದು ಹೋಟೆಲ್, ಅಪಾರ್ಟ್ಮೆಂಟ್, ಮನೆಗಳಲ್ಲಿ ದಂಧೆ ನಡೆಸುತ್ತಿದ್ದವರ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.