ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್: ಚಿನ್ನ, ಬೆಳ್ಳಿ ಎರಡೂ ಬೆಲೆ ಏರಿಕೆ, ಇಂದಿನ ದರಪಟ್ಟಿ ಇಲ್ಲಿದೆ!

0
Spread the love

ಬೆಂಗಳೂರು:- ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಚಿನ್ನ, ಬೆಳ್ಳಿ ಎರಡೂ ಬೆಲೆ ದಿಢೀರ್ ಏರಿಕೆ ಕಂಡಿದೆ. ಮೊನ್ನೆ ಸತತವಾಗಿ ಎರಡು ಬಾರಿ ಇಳಿಕೆ ಆಗಿದ್ದ ಚಿನ್ನದ ಬೆಲೆ ಈಗ ಸತತ ಎರಡನೇ ಬಾರಿ ಏರಿಕೆ ಕಂಡಿದೆ. ಇವತ್ತು ಗುರುವಾರ ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 15 ರೂನಷ್ಟು ಹೆಚ್ಚಳವಾಗಿದೆ. ಇದೇ ವೇಳೆ, ಬೆಳ್ಳಿ ಬೆಲೆಯೂ ಸತತ ಎರಡನೇ ಬಾರಿ ಏರಿಕೆ ಆಗಿದೆ.

Advertisement

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 76,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 83,020 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,850 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 76,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,850 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ:
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 76,100 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 83,020 ರೂ
18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,270 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 985 ರೂ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 76,100 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 83,020 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 985 ರೂ.


Spread the love

LEAVE A REPLY

Please enter your comment!
Please enter your name here