ರಾಯಚೂರು: ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಯೊಬ್ಬಳನ್ನು ನಡುರಸ್ತೆಯಲ್ಲಿಯೇ ಕೊಲೆ ಮಾಡಿರುವ ದುರಂತ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದ ಹೊರ ಭಾಗದಲ್ಲಿ ನಡೆದಿದೆ. ಶಿಫಾ (22) ಮೃತ ವಿದ್ಯಾರ್ಥಿನಿಯಾಗಿದ್ದು,
Advertisement
ಸಿಂಧನೂರು ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಎಂಎಸ್ ಸಿ ಓದುತ್ತಿದ್ದ ವಿದ್ಯಾರ್ಥಿನಿಯಾಗಿದ್ದಳು. ಮೂಲತಃ ರಾಯಚೂರು ಜಿಲ್ಲೆ ಲಿಂಗಸುಗೂರಿನ ಯುವತಿಯಾಗಿದ್ದು,
ಬೆಳಿಗ್ಗೆ ಲಿಂಗಸುಗೂರಿನಿಂದ ಸಿಂಧನೂರಿಗೆ ಕಾಲೇಜಿಗೆ ಹೋಗುವ ವೇಳೆ ಕತ್ತು ಸೀಳಿ ಹತ್ಯೆ ಮಾಡಲಾಗಿದೆ. ಪರಿಚಯಸ್ಥರೇ ಹತ್ಯೆಗೈದಿರೊ ಶಂಕೆಯಾಗಿದ್ದು, ಸ್ಥಳಕ್ಕೆ ಸಿಂಧನೂರು ಟೌನ್ ಪೊಲೀಸರ ಭೇಟಿ ಪರಿಶೀಲನೆ ನಡೆಸಿ ತನಿಖೆ ಮುಂದುವರೆಸಿದ್ದಾರೆ.