ಯಾವುದೇ ವಿದೇಶಿ ಹಸ್ತಕ್ಷೇಪವಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನವಿದು: ಪ್ರಧಾನಿ ಮೋದಿ

0
Spread the love

ನವದೆಹಲಿ: 10 ವರ್ಷಗಳ ಬಳಿಕ ಯಾವುದೇ ವಿದೇಶಿ ಹಸ್ತಕ್ಷೇಪವಿಲ್ಲದೆ ಅಧಿವೇಶನ ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನವದೆಹಲಿ ಮಾತನಾಡಿದ ಅವರು,  2014 ರಿಂದ, ಇದು ಮೊದಲ ಸಂಸತ್ ಅಧಿವೇಶನವಾಗಿದ್ದು,

Advertisement

ನಮ್ಮ ವ್ಯವಹಾರಗಳಲ್ಲಿ ಯಾವುದೇ ವಿದೇಶಿ ಹಸ್ತಕ್ಷೇಪ ಕಂಡುಬಂದಿಲ್ಲ, ಇದರಲ್ಲಿ ಯಾವುದೇ ವಿದೇಶಿ ಶಕ್ತಿಗಳಿಲ್ಲ. ಪ್ರತಿ ಬಜೆಟ್ ಅಧಿವೇಶನಕ್ಕೂ ಮುನ್ನ ನಾನು ಇದನ್ನು ಗಮನಿಸಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದರು. 2014ರಿಂದಲೂ ಯಾವುದಾದರೂ ಒಂದು ವಿಚಾರವನ್ನಿಟ್ಟುಕೊಂಡು ತೊಂದರೆ ಸೃಷ್ಟಿಸಲು ಕೆಲವರು ಸಿದ್ಧರಿರುತ್ತಿದ್ದರು.

ಆದರೆ 10 ವರ್ಷಗಳ ಬಳಿಕ ಯಾವುದೇ ವಿದೇಶಿ ಹಸ್ತಕ್ಷೇಪವಿಲ್ಲದೆ ಅಧಿವೇಶನ ನಡೆಯುತ್ತಿದೆ. 2047 ರಲ್ಲಿ ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪವನ್ನು ಈಡೇರಿಸುತ್ತದೆ ಎಂದು ನಾನು ವಿಶ್ವಾಸದಿಂದ ಹೇಳಬಲ್ಲೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here