ನವದೆಹಲಿ: ಸಂಸತ್‌ನಲ್ಲಿ 2025-26 ನೇ ಸಾಲಿನ ಬಜೆಟ್ ಮಂಡನೆ ಆರಂಭ ಆಗಿದೆ. ಬಜೆಟ್ ಆರಂಭದಲ್ಲಿಯೇ ಅನ್ನದಾತರಿಗೆ ಸಿಹಿಸುದ್ದಿ ನೀಡಿದ್ದಾರೆ. ಈ ವರ್ಷದ ಬಜೆಟ್ ನಲ್ಲಿ ರೈತರಿಗೆ ವಿಶೇಷ ಗಮನ ನೀಡಲಾಗಿದ್ದು, ರೈತರ ಆದಾಯ ಹೆಚ್ಚಿಸಲು ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಈ ಅವಧಿಯಲ್ಲಿ, ನಿರ್ಮಲಾ ಸೀತಾರಾಮನ್ ಅವರು ರೈತರಿಗಾಗಿ ಅನೇಕ ಯೋಜನೆಗಳು ಹೊರಹೊಮ್ಮಿಸಿದ್ದಾರೆ..
2025 ರ ಬಜೆಟ್‌ನಲ್ಲಿ, ಕೇಂದ್ರ ಸರ್ಕಾರವು ಕೃಷಿ ಮೂಲಸೌಕರ್ಯವನ್ನು ಬಲಪಡಿಸುವುದು, ಕೃಷಿಯಲ್ಲಿ ತಂತ್ರಜ್ಞಾನವನ್ನು ಉತ್ತೇಜಿಸುವುದು ಮತ್ತು ನೈಸರ್ಗಿಕ ಕೃಷಿಯತ್ತ ರೈತರ ಒಲವನ್ನು ಹೆಚ್ಚಿಸುವುದರ ಮೇಲೆ ಗಮನ ಹರಿಸಿದೆ ಎಂದ ಅವರು, ಕಿಸಾನ್ ಕ್ರೆಡಿಟ್ ಕಾರ್ಡ್‌ನ ಬಜೆಟ್ ಅನ್ನು ಹೆಚ್ಚಿಸುವುದಾಗಿ ಘೋಷಿಸಿದ್ದಾರೆ. ಈಗ ಕ್ರೆಡಿಟ್ ಕಾರ್ಡ್ ಮೇಲಿನ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಲಾಗಿದೆ..ಅದರಂತೆ ಸದ್ಯ ರೈತರಿಗೆ ಸುಲಭವಾಗಿ ಸಾಲ ಸಿಗಲಿದೆ. ಜೊತೆಗೆ ಆರಂಭಿಕ ಸಾಲ ಸೌಲಭ್ಯವನ್ನು 10 ಕೋಟಿ ರೂ.ಗೆ ಹೆಚ್ಚಿಸಲಾಗಿದೆ ಎಂದಿದ್ದಾರೆ.
ಕಿಸಾನ್ ಕ್ರೆಡಿಟ್ ಕಾರ್ಡ್‌ಗಳು (ಕೆಸಿಸಿ) 7.7 ಕೋಟಿ ರೈತರು, ಮೀನುಗಾರರು ಮತ್ತು ಡೈರಿ ರೈತರಿಗೆ ಅಲ್ಪಾವಧಿಯ ಸಾಲಗಳನ್ನು ಸುಗಮಗೊಳಿಸುವುದನ್ನು ಮುಂದುವರಿಸುತ್ತದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಘೋಷಿಸಿದರು. ಕೆಸಿಸಿ ಮೂಲಕ ಪಡೆಯುವ ಸಾಲದ ಸಾಲದ ಮಿತಿಯನ್ನು ₹ 3,000 ರಿಂದ ₹ 5,000 ಕ್ಕೆ ಹೆಚ್ಚಿಸಲಾಗುವುದು ಎಂದು ಅವರು ಹೇಳಿದರು.