ಭೀಕರ ರಸ್ತೆ ಅಪಘಾತ: BMTC ಬಸ್ ಹರಿದು ಮಹಿಳೆ ಸಾವು!

0
Spread the love

ಬೆಂಗಳೂರು:- ಬಿಎಂಟಿಸಿ ಬಸ್ ಹರಿದು ಮಹಿಳೆ ಸಾವನ್ನಪ್ಪಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ನಾಯಂಡನಹಳ್ಳಿ ಬಳಿ ಜರುಗಿದೆ.

Advertisement

42 ವರ್ಷದ ಸರೋಜಾ ಮೃತ ದುರ್ದೈವಿ ಎನ್ನಲಾಗಿದೆ. ಜ್ಞಾನಭಾರತಿಯಲ್ಲಿ ಮದುವೆ ಮುಗಿಸಿಕೊಂಡು ರಾತ್ರಿ 9.30 ರ ಸುಮಾರಿಗೆ ಹೋಂಡಾ ಆ್ಯಕ್ಟಿವಾದಲ್ಲಿ ಸೋದರನ ಜೊತೆ ಬೈಕ್​ನಲ್ಲಿ ಸರೋಜ ಮನೆಗೆ ಹೊರಟಿದ್ದರು.

ದಾರಿಯಲ್ಲಿ ಮುಂದೆ ನಿಂತಿದ್ದ ಕಾರಿನ ಡೋರ್ ಏಕಾಏಕಿ ತೆರೆದಿದೆ. ಇದರಿಂದ, ಡೋರ್​​ಗೆ ಟಚ್ ಆಗಿ ಬೈಕ್​ನ ಹಿಂಬದಿ ಕುಳಿತಿದ್ದ ಸರೋಜಾ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಹಿಂದೆ ಬರುತ್ತಿದ್ದ ಬಿಎಂಟಿಸಿ ಬಸ್ ಸರೋಜಾ ಮೇಲೆ ಹರಿದಿದೆ. ಸರೋಜಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳೀಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here