ಟೈಯರ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ: ತಪ್ಪಿದ ಭಾರೀ ಅನಾಹುತ!

0
Spread the love

ರಾಮನಗರ:- ಟೈಯರ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿ ಭಾರೀ ಅನಾಹುತ ತಪ್ಪಿರುವ ಘಟನೆ ರಾಮನಗರದ ಹಾರೋಹಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿರೋ ಕಾರ್ಖಾನೆಯಲ್ಲಿ ಭಾನುವಾರ ನಡೆದಿದೆ.

Advertisement

ರಮೇಶ್ ಎಂಬುವವರಿಗೆ ಸೇರಿದ ಟೈಯರ್‌ ಕಾರ್ಖಾನೆಗೆ ಬೆಂಕಿ ಬಿದ್ದಿದೆ. ಈ ವೇಳೆ ಫ್ಯಾಕ್ಟರಿ ಯೂನಿಟ್ ಹೊತ್ತಿ ಉರಿದಿದೆ. ಭಾನುವಾರ ಕಾರ್ಮಿಕರು ಇಲ್ಲದೇ ಇರುವುದರಿಂದ ಭಾರೀ ಅನಾಹುತ ತಪ್ಪಿದ ಅನಾಹುತ ತಪ್ಪಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ, ಬೆಂಕಿ ನಂದಿಸಲು ಹರಸಾಹಸ ಪಟ್ಟಿದೆ.

ಈ ಹಿಂದೆಯೂ ಇದೇ ಟೈಯರ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಬಳಿಕ ಆ ಕಾರ್ಖಾನೆ ಲೈಸೆನ್ಸ್ ರದ್ದು ಮಾಡಲಾಗಿತ್ತು. ಇದೀಗ ಲೈಸೆನ್ಸ್ ಇಲ್ಲದೇ ಕಾರ್ಖಾನೆ ನಡೆಸುತ್ತಿದ್ದಾರೆಂಬ ಆರೋಪವೂ ಕೇಳಿಬಂದಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here