ಹಾಸನ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ಗಳ ಹಾವಳಿ ಹೆಚ್ಚಾಗುತ್ತಿದ್ದು, ಇದರಿಂದ ಬಡವರು ಪ್ರಾಣ ಬಿಡುತ್ತಿದ್ದಾರೆ. ಎಷ್ಟೋ ಜನರು ಸಾಲ ಮಾಡಿ ಮರುಪಾವತಿ ಮಾಡಲಾಗದೇ ಸಾವಿನ ದಾರಿ ಹಿಡಿಯುತ್ತಿದ್ದಾರೆ. ಇದೀಗ ಈ ಪೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಜೀವ ಹೋಗಿದೆ.
Advertisement
ಹೌದು ಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ, ಅರಕಲಗೂಡು ತಾಲ್ಲೂಕು, ಕೊಣನೂರು ಹೋಬಳಿ, ಕಂಟೇನಹಳ್ಳಿ ಗ್ರಾಮದಲ್ಲಿ ನಡೆದಿದೆ.ರವಿ.ಕೆ.ಡಿ. (50) ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ರೈತನಾಗಿದ್ದು, ವಿವಿಧ ಸಂಘಗಳು, ಮೈಕ್ರೋ ಫೈನಾನ್ಸ್ಗಳಿಂದ ಒಟ್ಟು 9 ಲಕ್ಷ ಸಾಲ ಮಾಡಿಕೊಂಡಿದ್ದರು.
ಸಾಲದ ಹಣ ಪಾವತಿಸುವಂತೆ ಒತ್ತಡ ಹೆಚ್ಚಾದ ಹಿನ್ನಲೆ ಮನೆಯಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.