ಟೀಮ್ ಇಂಡಿಯಾವು ಆಂಗ್ಲರ ವಿರುದ್ಧ ಟಿ20 ಸರಣಿ ಗೆದ್ದ ಬಳಿಕ ಇದೇ ಫೆಬ್ರವರಿ 6 ರಿಂದ ಶುರುವಾಗಲಿರುವ ಏಕದಿನ ಸರಣಿಗಾಗಿ ಸಜ್ಜಾಗುತ್ತಿದೆ.
ಟಿ20 ಸರಣಿ ಮುಗಿಸಿರುವ ಭಾರತ ತಂಡವು ಏಕದಿನ ಸರಣಿಗಾಗಿ ಸಜ್ಜಾಗಬೇಕಿದೆ. ಏಕೆಂದರೆ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯು ಫೆಬ್ರವರಿ 6 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು 3 ಪಂದ್ಯಗಳನ್ನಾಡಲಾಗುತ್ತದೆ.
ಮುಂಬರುವ ಚಾಂಪಿಯನ್ಸ್ ಟ್ರೋಫಿ ದೃಷ್ಟಿಯಿಂದ ಟೀಮ್ ಇಂಡಿಯಾ ಪಾಲಿಗೆ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ತುಂಬಾ ಮಹತ್ವದ್ದು. ಏಕೆಂದರೆ ಆಂಗ್ಲರ ವಿರುದ್ಧದ ಸರಣಿ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿಗಾಗಿ ತೆರಳಲಿದೆ.
ಗೆಲುವಿನ ಲಯದೊಂದಿಗೆ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಪಾಲ್ಗೊಳ್ಳಲು ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಪ್ರದರ್ಶನ ನೀಡಲೇಬೇಕು.
ವೇಳಾಪಟ್ಟಿ ಇಲ್ಲಿದೆ!
ಫೆಬ್ರವರಿ 06, ಗುರುವಾರದಂದು ಭಾರತ vs ಇಂಗ್ಲೆಂಡ್ ಮೊದಲ ಏಕದಿನ ಪಂದ್ಯ ನಾಗ್ಪುರದಲ್ಲಿ ನಡೆಯಲಿದೆ.
ಫೆಬ್ರವರಿ 09, ಭಾನುವಾರದಂದು ಭಾರತ vs ಇಂಗ್ಲೆಂಡ್, ಎರಡನೇ ಏಕದಿನ ಪಂದ್ಯವು ಕಟಕ್ ನಲ್ಲಿ ನಡೆಯಲಿದೆ.
ಫೆಬ್ರವರಿ 12, ಬುಧವಾರದಂದು ಭಾರತ vs ಇಂಗ್ಲೆಂಡ್ ಮೂರನೇ ಏಕದಿನ ಪಂದ್ಯವು ಅಹಮದಾಬಾದ್ ನಲ್ಲಿ ನಡೆಯಲಿದೆ.
ಭಾರತ ಮತ್ತು ಇಂಗ್ಲೆಂಡ್ ತಂಡಗಳು ಹೀಗಿವೆ:
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್, ರವೀಂದ್ರ ಜಡೇಜಾ.
ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜೇಕೊಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮೀ ಓವರ್ಟನ್, ಜಾಮಿ ಸ್ಮಿತ್, ಲಿಯಾಮ್ ಲಿವಿಂಗ್ಸ್ಟೋನ್, ಆದಿಲ್ ರಶೀದ್, ಜೋ ರೂಟ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.