ಬೆಂಗಳೂರು:- ಬೆಂಗಳೂರಿನ ಲಾಲ್‌ಬಾಗ್ ಮೆಟ್ರೋ ನಿಲ್ದಾಣ ಬಳಿ ನಿಂತಿದ್ದ ಕಾರಿಗೆ ಬೆಂಕಿ ಏಕಾಏಕಿ ಹೊತ್ತಿಕೊಂಡಿರುವ ಘಟನೆ ಜರುಗಿದೆ.
Advertisement
ಇಂದು ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ನಿಂತಿದ್ದ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ಪಕ್ಕದಲ್ಲಿ ನಿಂತಿದ್ದ ಬೈಕ್‌ಗೂ ಕೂಡ ಬೆಂಕಿ ತಗುಲಿದೆ. ಇದರಿಂದ ಬೈಕ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ, ಬೆಂಕಿ ನಂದಿಸಿದ್ದಾರೆ.