ಬೇಕಿರೋದು ಜಸ್ಟ್ 94 ರನ್: ವಿಶ್ವ ದಾಖಲೆ ನಿರ್ಮಿಸಲಿದ್ದಾರೆ ಕಿಂಗ್ ಕೊಹ್ಲಿ!

0
Spread the love

ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರು ವಿಶ್ವ ದಾಖಲೆ ನಿರ್ಮಿಸುವ ಸನಿಹದಲ್ಲಿದ್ದಾರೆ.

Advertisement

ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ 94 ರನ್‌ ಸಿಡಿಸಿದರೆ ವೇಗವಾಗಿ 14 ಸಾವಿರ ರನ್‌ ಗಡಿ ದಾಟಿದ ಮೊದಲ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರವಾಗಲಿದ್ದಾರೆ.

ಸದ್ಯ 295 ಪಂದ್ಯವಾಡಿರುವ ಕೊಹ್ಲಿ 283 ಇನ್ನಿಂಗ್ಸ್‌ಗಳಿಂದ ಒಟ್ಟು 13,906 ರನ್‌ ಹೊಡೆದಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 14 ಸಾವಿರ ರನ್‌ಗಳ ಗಡಿಯನ್ನು ಇಬ್ಬರು ಮಾತ್ರ ದಾಟಿದ್ದಾರೆ. ಸಚಿನ್‌ ತೆಂಡೂಲ್ಕರ್‌ 350 ಇನ್ನಿಂಗ್ಸ್‌ ತೆಗೆದುಕೊಂಡರೆ ಶ್ರೀಲಂಕಾದ ಕುಮಾರ ಸಂಗಕ್ಕಾರ 378 ಇನ್ನಿಂಗ್ಸ್‌ ತೆಗೆದುಕೊಂಡು ಈ ಸಾಧನೆ ಮಾಡಿದ್ದಾರೆ.

ಇಂಗ್ಲೆಂಡ್‌ ವಿರುದ್ಧ ಸರಣಿಯಲ್ಲಿ ಕೊಹ್ಲಿ ಈ ವಿಶ್ವದಾಖಲೆ ನಿರ್ಮಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.


Spread the love

LEAVE A REPLY

Please enter your comment!
Please enter your name here