ವಿಜಯಸಾಕ್ಷಿ ಸುದ್ದಿ, ಮುಳಗುಂದ: ನಾರಾಯಣ ಹುಲಮನಿ ಫೌಂಡೇಶನ್ ವತಿಯಿಂದ ನಡೆದ ಇಂಟೆಲಿಕಿಡ್ಜ್ ಅಬಾಕಸ್ 1ನೇ ಲೆವಲ್ ಸ್ಪರ್ಧೆಯಲ್ಲಿ ನೀಲಗುಂದದ ದಿವ್ಯ ಚೇತನ ಆಂಗ್ಲ ಮಾಧ್ಯಮ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ ಸಾಕ್ಷಿ ಕಲ್ಲನಗೌಡ್ರ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿದ್ದಾಳೆ.
Advertisement
ಧಾರವಾಡದ ರಾಯಾಪೂರದಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ತರಬೇತಿ ಸಂಸ್ಥೆಯಲ್ಲಿ ಇತ್ತೀಚೆಗೆ ಫೌಂಡೇಶನ್‌ನ ವ್ಯವಸ್ಥಾಪಕ ನಿರ್ದೇಶಕಿ ಸೀಮಾ ಹುಲಮನಿ ಪ್ರಶಸ್ತಿ ಪ್ರದಾನ ಮಾಡಿದರು.