ಬೆಂಗಳೂರು: ರಾಜ್ಯದಲ್ಲಿ ಬೆಳ್ಳಂ ಬೆಳಗ್ಗೆ ಉದ್ಯಮಿಗಳು, ಬಿಲ್ಡರ್ ಗಳಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಮನೆ, ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ನಡೆಸಿದ್ದಾರೆ.
ರಾಜ್ಯಾದ್ಯಂತ 30 ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ 30 ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಉದ್ಯಮಿಗಳ ಮನೆ, ಕಚೇರಿಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನೂ ಮೈಸೂರಿನಲ್ಲಿ ರಾಮಕೃಷ್ಣನಗರದಲ್ಲಿರುವ ಗುತ್ತಿಗೆದಾರ ರಾಮಕೃಷ್ಣೇಗೌಡ ಅವರ ಮನೆ ಮೇಲೂ ಐಟಿ ದಾಳಿ ನಡೆದಿದೆ. ರಾಮಕೃಷ್ಣೇಗೌಡ ಇಟ್ಟಿಗೆ ಫ್ಯಾಕ್ಟರ್ ಸೇರಿದಂತೆ ಇನ್ನಿತರ ವ್ಯವಹಾರ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಅದಲ್ಲದೆ ಮೈಸೂರಿನಲ್ಲೇ ಎಂ ಪ್ರೋ ಪ್ಯಾಲೇಸ್, ಹೋಟೆಲ್, ಕಲ್ಯಾಣ ಮಂಟಪದ ಸೇರಿದಂತೆ 10ಕ್ಕೂ ಹೆಚ್ಚಿ ಕಡೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದಾರೆ. ಮೂರು ಕಾರುಗಳಲ್ಲಿ ಬಂದ ಐಟಿ ಅಧಿಕಾರಿಗಳ ತಂಡ ಸ್ಥಳಕ್ಕೆ ಬರುತ್ತಿದ್ದಂತೆ ಸೆಕ್ಯುರಿಟಿ ಗಾರ್ಡ್ ಫೋನ್ ಕಿತ್ತುಕೊಂಡಿದ್ದಾರೆ. ಮೈಸೂರಿನ ದೇವೇಗೌಡ ವೃತ್ತದ ಬಳಿ ಇರುವ ಎಂ ಪ್ರೋ ಪ್ಯಾಲೇಸ್ ಸೇರಿದಂತೆ ವಿವಿಧೆಡೆ 3 ಗಂಟೆಯಿಂದ ಶೋಧ ನಡೆಸುತ್ತಿದ್ದಾರೆ.