ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಸಿನಿಮಾದ ಬಳಿಕ ಟಾಕ್ಸಿಕ್ ಸಿನಿಮಾದ ಶೂಟಿಂಗ್ ನಲ್ಲಿ ತೊಡಗಿಕೊಂಡಿದ್ದಾರೆ. 2025ರ ಮೋಸ್ಟ್ ಎಕ್ಸ್‌ಪೆಕ್ಟೆಡ್ ಸಿನಿಮಾವಾಗಿರೋ ಟಾಕ್ಸಿಕ್ ಚಿತ್ರತಂಡದಿಂದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಒಂದು ಸಿಕ್ಕಿದೆ. ಸದ್ಯ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದು ನಟಿಯರಾದ ನಯನತಾರಾ, ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ, ಹುಮಾ ಖುರೇಶಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದೆ.
ಟಾಕಿಕ್ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದ್ದು ಇದೇ ವರ್ಷ ಸಿನಿಮಾ ರಿಲೀಸ್ ಮಾಡಬೇಕು ಎಂದು ನಿರ್ಮಾಪಕರು ರೆಡಿಯಾಗಿದ್ದಾರೆ. ಹೀಗಾಗಿ ಕೊಂಚವು ಬಿಡುವಿಲ್ಲದೆ ಚಿತ್ರೀಕರಣ ಮಾಡಲಾಗುತ್ತಿದೆ. ಹಲವು ದಿನಗಳ ಕಾಲ ಮುಂಬೈ, ಗೋವಾದಲ್ಲಿ ಚಿತ್ರೀಕರಣ ಮಾಡಿದ್ದ ಚಿತ್ರತಂಡ ಇದೀಗ ಬೆಂಗಳೂರಿನಲ್ಲಿ ಶೂಟಿಂಗ್ ಆರಂಭಸಿದೆ.
ಕಳೆದ ಕೆಲವು ದಿನಗಳಿಂದ ಯಶ್ ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಮೊದಲು ಬೆಂಗಳೂರಿನಿಂದಲೇ ಶೂಟಿಂಗ್ ಆರಂಭಿಸಿದ್ದ ತಂಡ ಬಳಿಕ ಮುಂಬೈಗೆ ಶಿಫ್ಟ್ ಆಗಿತ್ತು. ಮುಂಬೈನಲ್ಲಿ ಬಿಗ್ ಶೆಡ್ಯೂಲ್ ಮುಗಿಸಿದ ಬಳಿಕ ಇಡೀ ತಂಡ ಗೋವಾ ಶಿಫ್ಟ್ ಆಗಿತ್ತು. ಅಲ್ಲಿಯೂ ಮೂರನೇ ಹಂತದ ಶೂಟಿಂಗ್ ಮುಗಿಸಿ ನಾಲ್ಕನೇ ಹಂತದ ಶೂಟಿಂಗ್‌ಗೆ ಸಜ್ಜಾಗುತ್ತಿದೆ. ಇದೇ ಹಂತದಲ್ಲಿ ನಾಲ್ಕು ಮಂದಿ ನಾಯಕಿಯರು ಒಟ್ಟಿಗೆ ನಟಿಸುತ್ತಿದ್ದು ಬೆಂಗಳೂರಿನಲ್ಲಿ ಶೂಟಿಂಗ್ ಮಾಡಲಾಗುತ್ತಿದೆ.